ಉಪನ್ಯಾಸಕಿ ವೃತ್ತಿಗೂ ತಟ್ಟಿದ ಹಿಜಾಬ್ ಸಂಘರ್ಷ.
ತುಮಕೂರು_ರಾಜ್ಯ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಹಿಜಾಬ್ ಹಾಗೂ ಕೇಸರಿ ಶಾಲಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು ಹಿಜಾಬ್ ಹಾಗೂ ಕೇಸರಿ ಶಾಲು ಸಹಿತ ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸಿ ಶಾಲಾ-ಕಾಲೇಜುಗಳಿಗೆ ಬರಬಾರದು ಎಂದು ಆದೇಶಿಸಿದ್ದು.
ಇನ್ನು ಹೈಕೋರ್ಟ್ನಲ್ಲಿ ಹಿಜಾಬ್ ಹಾಗೂ ಕೇಸರಿ ಸಂಘರ್ಷದ ವಿಚಾರಣೆ ನಡೆಯುತ್ತಲಿದೆ. ಆದರೂ ಸಹ ರಾಜ್ಯಾದ್ಯಂತ ದಿನದಿನ ಹಿಜಾಬ್ ಸಂಘರ್ಷ ಮುಂದುವರೆದಿದ್ದು ವಿದ್ಯಾರ್ಥಿಗಳು ಹಾಗೂ ಪೋಷಕರು ಹಿಜಾಬ್ ಪರ ನಿಂತಿದ್ದಾರೆ.
ಇದರಿಂದಾಗಿ ವಿದ್ಯಾರ್ಥಿಗಳಿಗೂ ಸಹ ಹಿಜಾಬ್ ಸಂಘರ್ಷದ ಬಿಸಿ ತಟ್ಟಿದ್ದು ರಾಜ್ಯಾದ್ಯಂತ ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸದೆ ಶಾಲಾ-ಕಾಲೇಜುಗಳಿಗೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಇನ್ನು ತುಮಕೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪಟೂರು ಮೂಲದ ಚಾಂದಿನಿ ಎನ್ನುವವರು ತುಮಕೂರಿನ ಕೆಲ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಇನ್ನೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಜಾಬ್ ಧರಿಸದೆ ಕಾಲೇಜಿಗೆ ಬರಬೇಕಾದ ಹಿನ್ನೆಲೆಯಲ್ಲಿ ಹಾಗೂ ದಿನದಿನ ಹಿಜಾಬ್ ಸಂಘರ್ಷ ತಾರಕಕ್ಕೇರಿದ ಪರಿಣಾಮ ಮನನೊಂದ ಅತಿಥಿ ಉಪನ್ಯಾಸಕಿ ಚಾಂದಿನಿ ಎನ್ನುವವರು ತುಮಕೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜೈನ್ ಪಿಯು ಕಾಲೇಜಿಗೆ ರಾಜೀನಾಮೆ ನೀಡಿದ್ದಾರೆ. ಪ್ರತಿನಿತ್ಯವೂ ಕೆಲಸಕ್ಕೆ ಆಗಮಿಸುವ ವೇಳೆಯೂ ಹಿಜಾಬ್ ಧರಿಸಿ ಕೆಲಸಕ್ಕೆ ಆಗಮಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅದೇನೇ ಇರಲಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಬೇಕಾದ ಉಪನ್ಯಾಸಕಿ ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ಉಪನ್ಯಾಸಕಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.