ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು .

ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು .

 

ತುಮಕೂರು_ಶಿವಮೊಗ್ಗ ನಗರದ ಭಾರತಿ ನಗರದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತನ ಹತ್ಯೆ ಖಂಡಿಸಿ ತುಮಕೂರಿನಲ್ಲಿ ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

 

 

ಸೋಮವಾರ ತುಮಕೂರು ನಗರದ ಟೌನ್ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ಆರೋಪಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರ ಹಾಕಿದ ಕಾರ್ಯಕರ್ತರು ಹತ್ಯೆಮಾಡಿದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದರು.

 

 

ಇದೇ ಸಂದರ್ಭದಲ್ಲಿ ಮುಖಂಡ ಜಿ.ಕೆ ಶ್ರೀನಿವಾಸ್ ಮಾತನಾಡಿ ರಾಜ್ಯದಲ್ಲಿ ಪದೇಪದೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ಮೇಲೆ ಹಲ್ಲೆ ,ಹತ್ಯೆ ಪ್ರಕರಣಗಳು ನಡೆಯುತ್ತಿದ್ದು ಕೂಡಲೇ ಸರ್ಕಾರ ಆರೋಪಿಗಳನ್ನು ಬಂಧಿಸಿ ಎನ್ಕೌಂಟರ್ ಮಾಡುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

 

ರಾಜ್ಯದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಹಿಂದೂಪರ ಸಂಘಟನೆಯಲ್ಲಿ ಕೆಲಸ ಮಾಡುವ ಹುಡುಗರು ಬಡ ಹಾಗೂ ಮಧ್ಯಮ ವರ್ಗದ ಕಾರ್ಯಕರ್ತರ ಮೇಲೆ ಪದೇ ಪದೇ ಹತ್ಯೆ ಹಾಗೂ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಂತೆ ಕಠಿಣ ಕ್ರಮ ಕೈಗೊಂಡು ಇಂತಹ ಆರೋಪಿಗಳಿಗೆ ಶೀಘ್ರ ಶಿಕ್ಷೆ ಆಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

 

 

 

ಬಜರಂಗದಳದ ಸಂಚಾಲಕ ಜೀವನ್ ಮಾತನಾಡಿ ಸರ್ಕಾರಗಳು ಬರುತ್ತಿವೆ ಹೋಗುತ್ತೇವೆ ಆದರೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಸರ್ಕಾರ ಕೂಡಲೇ ಎಚ್ಚೆತ್ತು ಕೊಳ್ಳಬೇಕು ಈ ಮೂಲಕ ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

 

 

ಇನ್ನು ತುಮಕೂರು ನಗರದ ಟೌನ್ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದ ಕಾರ್ಯಕರ್ತರು ಮೃತಪಟ್ಟ ಹಿಂದೂಪರ ಕಾರ್ಯಕರ್ತ ಹರ್ಷನಿಗೆ ಮೌನಾಚರಣೆ ಮಾಡಿದರು.

 

 

 

ಇನ್ನು ಪ್ರತಿಭಟನೆಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರಾದ ಕುಮಾರ್ ,ದರ್ಶನ್, ಧನುಷ್ ,ದಯಾನಂದ್, ರಾಕೇಶ್, ಕೆ. ಪಿ ಮಹೇಶ್ ಸೇರಿದಂತೆ ಹಲವು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ವರದಿ _ಮಾರುತಿ ಪ್ರಸಾದ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!