ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾದ ಕರ್ನಾಟಕದ ವಿದ್ಯಾರ್ಥಿ.
ರಷ್ಯಾ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಇಂದು ಮದ್ಯಾಹ್ನ 12 ಗಂಟೆ ವೇಳೆಗೆ ಉಕ್ರೇನ್‌ನ ಖಾರ್ಕೀವ್‌ನಲ್ಲಿ ರಷ್ಯಾ ನಡೆಸಿದ ಶೇಲ್ ದಾಳಿಗೆ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ.
ಮೃತ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂದು ಗುರುತಿಸಲಾಗಿದೆ.
ಭಾರತದ ವಿದ್ಯಾರ್ಥಿ ಶೇಲ್ ದಾಳಿಯಲ್ಲಿ ಸಾವನ್ನಪ್ಪಿರುವ ಬಗ್ಗೆ ಉಕ್ರೇನ್‌ನ ವಿಧಿವಿಜ್ಞಾನ ತಜ್ಞೆ ಖಚಿತಪಡಿಸಿದ್ದಾರೆ. ಇನ್ನು ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ, ಭಾರತೀಯ ವಿದ್ಯಾರ್ಥಿಯೊರ್ವ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ವಿದ್ಯಾರ್ಥಿ ನಿಧನಕ್ಕೆ ಸಚಿವಾಲಯ ಸಂತಾಪ ಸೂಚಿಸಿದೆ.
ಕಳೆದ 2 ದಿನಗಳ ಹಿಂದೆ ನವೀನ ತನ್ನ ತಂದೆಯ ಜೊತೆ ಕೊನೆಯದಾಗಿ ಮಾತನಾಡಿದ್ದಾರೆ. ನಂತರ ಪೋಷಕರ ಧೈರ್ಯ ತುಂಬಿದರು
ಆದರೆ ನವೀನ ತನ್ನ ಸ್ನೇಹಿತರೊಂದಿಗೆ ಶಾಪಿಂಗ್ ಗೆ ಎಂದು ತೆರಳಿದ್ದ ವೇಳೆಯಲ್ಲಿ ರಷ್ಯಾ ಸೇನೆ ಶೆಲ್ ದಾಳಿ ನಡೆಸಿದ್ದು ನವೀನ್ ಮೃತಪಟ್ಟಿದ್ದಾರೆ. ಇನ್ನು ನವೀನ್ ಮೃತದೇಹ ಕರ್ಕಿವ್ ಶವಾಗಾರದಲ್ಲಿ ಇದ್ದು. ನವೀನ್ ಕುಟುಂಬಕ್ಕೆ ವಿದೇಶಾಂಗ ಇಲಾಖೆ ಸಂತಾಪ ಸೂಚಿಸಿದೆ.