ಯುವತಿ ಸಾವು ಪ್ರಕರಣ ತನಿಖೆ ಚುರುಕು_ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್.
ತುಮಕೂರಿನ 19 ವರ್ಷದ ಯುವತಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿಯ ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಳ್ಳಲಾಗಿದ್ದು ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಯುತ್ತಿದೆಯೆಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ರವರು ತಿಳಿಸಿದ್ದಾರೆ.
ಕರುನಾ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಬಂದ ವ್ಯಕ್ತಿ ನನ್ನ ಮಗಳನ್ನ ದುರುಪಯೋಗ ಪಡಿಸಿಕೊಂಡಿದ್ದು ನಂತರ ಆತ ನೀಡಿದ ಔಷಧಿಯ ಪರಿಣಾಮ ಯುವತಿ ಮೃತಪಟ್ಟಿದಾಳೆ ಎಂದು ದೂರು ದಾಖಲಾಗಿದ್ದು
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಆಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದ ಬಗ್ಗೆ ನಮಗೂ ಸಹ ಮಾಹಿತಿ ಬಂದಿತ್ತು ಅದಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸ್ ಸಿಬ್ಬಂದಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಸೂಚಿಸಿದ್ದೆವು ಅದರೊಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿಯ ತಾಯಿ ತಾವಾಗಿಯೇ ಬಂದು ದೂರು ನೀಡಿದ್ದು ತನಿಖೆ ನಡೆಯುತ್ತಿದೆ ಎಂದರು
ಮೃತ ಯುವತಿಯ ತಾಯಿಯ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ದಾಖಲು ಮಾಡಿ ತನಿಖೆ ಕೈಗೊಳ್ಳಲಾಗಿದೆ ಪ್ರಕರಣದ ಸತ್ಯಾಸತ್ಯತೆ ಹೊರತರಲು ತನಿಖೆ ಕೈಗೊಳ್ಳಲಾಗಿದೆ . ತುಮಕೂರು ನಗರ ಠಾಣೆಯ ಇನ್ಸ್ಪೆಕ್ಟರ್ ರವರಿಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದೆ ಈಗ ತಾಯಿಯ ದೂರಿನ ಮೇರೆಗೆ ತನಿಖೆ ನಡೆಯುತ್ತಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.
ವರದಿ _ವಿಜಯ ಭಾರತ ನ್ಯೂಸ್ಡೆಸ್ಕ್