ವೈದ್ಯಕೀಯ ಶಿಕ್ಷಣ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ವಿದ್ಯಾರ್ಥಿಗಳು.
ತುಮಕೂರು_ಉಕ್ರೇನ್ ಇಂದ ವಾಪಸಾಗಿರುವ ವಿದ್ಯಾರ್ಥಿಗಳು ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುವ ಸಲುವಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಉಕ್ರೇನ್ನಿಂದ ವಾಪಸಾಗಿರುವ ವಿದ್ಯಾರ್ಥಿಗಳು ತುಮಕೂರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ರವರಿಗೆ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಭೇಟಿ ಮಾಡಿದ ವಿದ್ಯಾರ್ಥಿಗಳು ಉಕ್ರೇನ್ ನಿಂದ ವಾಪಸಾಗಲು ಸಹಕರಿಸಿದ ಜಿಲ್ಲಾಧಿಕಾರಿಗಳಿಗೆ ಗುಲಾಬಿಯನ್ನು ನೀಡುವ ಮೂಲಕ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಉಕ್ರೇನ್ ನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿಯೇ ವೈದ್ಯಕೀಯ ಶಿಕ್ಷಣವನ್ನು ಮುಂದುವರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಏಕಾಏಕಿ ಯುದ್ಧದಿಂದ ಸ್ವದೇಶಕ್ಕೆ ಆಗಮಿಸಿದ್ದು ಈಗ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ ಹಾಗಾಗಿ ನಮ್ಮ ವೈದ್ಯಕೀಯ ಶಿಕ್ಷಣವನ್ನು ಮುಂದುವರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಮನವಿಯ ಆಧಾರದ ಮೇಲೆ ನಮ್ಮ ರಾಜ್ಯದಲ್ಲಿಯೇ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಅಗತ್ಯ ಕ್ರಮ ಕೈಗೊಂಡು ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾಗಬೇಕು ಎಂದು ಉಕ್ರೇನ್ ನಿಂದ ವಾಪಸಾಗಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಮನವಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ರೂಪಶ್ರೀ ,ಅಮೃತ, ಅಜಯ್ ಕುಮಾರ್, ಗಣೇಶ್, ಗೋಕುಲ್, ಮೇಘ ರವಿತೇಜ ,ರಾಮಚಂದ್ರ ಸೇರಿದಂತೆ ಹಲವು ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.
ವರದಿ _ಮಾರುತಿ ಪ್ರಸಾದ್ ತುಮಕೂರು