ಆಮ್ ಆದ್ಮಿ ಪಕ್ಷದ ಕದ ತಟ್ಟಲು ಮುಂದಾದ್ರಾ ಮಾಜಿ ಶಾಸಕ ಹೆಚ್ ನಿಂಗಪ್ಪ…..?
ತುಮಕೂರು – ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ತುಮಕೂರು ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ರಾಜಕೀಯ ದೃವೀಕರಣ ಬಿರುಸಿನಿಂದ ನಡೆಯುತ್ತಿದೆ.
ರಾಷ್ಟ್ರೀಯ ಪಕ್ಷ ಹಾಗೂ ಪ್ರಾದೇಶಿಕ ಪಕ್ಷಗಳಲ್ಲಿ ಗುರುತಿಸಿಕೊಂಡಿದ ಪ್ರಭಾವಿ ಮುಖಂಡರು ,ಮಾಜಿ ಶಾಸಕರುಗಳು ಆಮ್ ಆದ್ಮಿ ಪಕ್ಷದ ಕಡೆ ಒಲವು ತೋರಿ ಪಕ್ಷ ಸೇರ್ಪಡೆಗೆ ಮುಂದಾಗುತ್ತಿದ್ದಾರೆ. ಇದರ ಹಿಂದೆಯೇ
ತುಮಕೂರು ಗ್ರಾಮಾಂತರದ ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಧುರೀಣ ಮಾಜಿ ಶಾಸಕ ಹೆಚ್ ನಿಂಗಪ್ಪ ನವರನ್ನು ಆಮ್ ಆದ್ಮಿ ಪಕ್ಷದ ಮುಖಂಡರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಲಾಗಿ ಹತ್ತು ದಿನಗಳ ಕಾಲಾವಕಾಶ ಕೋರಿದ್ದಾರೆ ಎನ್ನಲಾಗಿದೆ. ಮುಂಬರುವ 2023ರ ವಿಧಾನ ಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಸಿದ್ದತೆ ನಡೆಸಿದ್ದು.
ತುಮಕೂರು ಜಿಲ್ಲೆಯ ಪ್ರಭಾವಿ ನಾಯಕರುಗಳಿಗೆ ಗಾಳ ಹಾಕಿದೆ ಈ ಸಂಬಂಧ ಈಗಾಗಲೇ ತಿಪಟೂರು ಮಾಜಿ ಶಾಸಕ ನಂಜಮರಿ ಒಲವು ತೋರಿದ್ದಾರೆ ಅದರ ಬೆನ್ನಲ್ಲೇ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಹೆಚ್ ನಿಂಗಪ್ಪ ಅವರು ಇದೇ ತಿಂಗಳು ಪಕ್ಷ ಸೇರಲು ಮುಂದಾಗಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇನ್ನು ಮಾಜಿ ಶಾಸಕ ಹೆಚ್ ನಿಂಗಪ್ಪನವರು ಇದುವರೆಗೂ ತಮಗೆ ಸಹಕಾರ ನೀಡಿದ ನಾಯಕರುಗಳ ಜೊತೆ ಸತತ ಮಾತುಕತೆಗಳು ನಡೆಸುತ್ತಿದ್ದಾರೆ ಎನ್ನಲಾಗಿದೆ ಎಲ್ಲರ ನಿರ್ಧಾರ ಪಡೆದು ಪಕ್ಷ ಸೇರುವ ಬಗ್ಗೆ ತೀರ್ಮಾನಿಸಲಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಎಎಪಿ ಪಕ್ಷದ ಜಿಲ್ಲಾ ಉಸ್ತುವಾರಿ ವಿಶ್ವನಾಥ್, ಪ್ರಭುಸ್ವಾಮಿ, ಕಾರ್ತಿಕ್, ಮಾರುತಿ, ಗೋವಿಂದರಾಜು, ಡಾಕ್ಟರ್ ವಿಮಲ್ ಪಾಂಡೆ ,ತೇಜಸ್ ಮಂಜುನಾಥಸ್ವಾಮಿ ಸೇರಿದಂತೆ ಹಲವು ಮುಖಂಡರು ಮಾಜಿ ಶಾಸಕ ಹೆಚ್ ನಿಂಗಪ್ಪ ರವರ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ.
ವರದಿ _ಮಾರುತಿ ಪ್ರಸಾದ್ ತುಮಕೂರು