ಶಸ್ತ್ರಚಿಕಿತ್ಸೆಯಾದ ಮಹಿಳೆಯರನ್ನು ನೆಲದ ಮೇಲೆ ಮಲಗಿಸಿ , ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಸರ್ಕಾರಿ ಆಸ್ಪತ್ರೆ.
ಪಾವಗಡ_ತುಮಕೂರು ಜಿಲ್ಲಾ ಆರೋಗ್ಯ ಇಲಾಖೆ ಪದೇಪದೇ ಎಡವಟ್ಟುಗಳನ್ನು ಮಾಡಿಕೊಂಡು ಪದೇ ಪದೇ ಸುದ್ದಿಯಾಗುತ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಾರಣ ಮಹಿಳೆಯರಿಗಾಗಿ ಪಾವಗಡದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಿರುವ ವೈದ್ಯರು ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯರನ್ನು ನೆಲದ ಮೇಲೆ ಮಲಗಿಸಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.
ಇನ್ನು ರಾಜ್ಯ ಸರ್ಕಾರ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕೋಟ್ಯಾಂತರ ರೂಗಳನ್ನು ವ್ಯಯಿಸಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತ ರೋಗಿಗಳ ಶುಶ್ರೂಷೆ ಗಾಗಿ ಸಾಕಷ್ಟು ಸೌಲಭ್ಯಗಳನ್ನು ಒದಗಿಸುತ್ತಿದ್ದರು ಸಹ ಶಸ್ತ್ರಚಿಕಿತ್ಸೆ ಯಾಗಿರುವ ಮಹಿಳೆಯರನ್ನು ನೆಲದ ಮೇಲೆ ಮಲಗಿಸಿ ರುವುದು ರಾಜ್ಯ ಆರೋಗ್ಯ ಇಲಾಖೆಯೆ ತಲೆತಗ್ಗಿಸುವಂತಾಗಿದೆ.
ಸುಮಾರು 25ಕ್ಕೂ ಹೆಚ್ಚು ಮಹಿಳೆಯರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ . ಬೆಡ್ ಇಲ್ಲದ ಕಾರಣ ಮಹಿಳೆಯರನ್ನು ನೆಲದ ಮೇಲೆ ಮಲಗಿಸಿದ್ದು ಸಾರ್ವಜನಿಕರು ಹಾಗೂ ರೋಗಿಗಳು ವೈದ್ಯರ ನಡೆಗೆ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಪಾವಗಡ ತಾಲೂಕಿನ ಗ್ರಾಮೀಣ ಭಾಗದ ಮಹಿಳೆಯರು ಸೇರಿದಂತೆ ಹಲವರು ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರೋಗಿಗಳಲ್ಲಿ ಬೆಡ್ ಮೇಲೆ ಮಲಗಿಸಿದೆ ನಿರ್ಲಕ್ಷ್ಯ ವಹಿಸಲಾಗಿದೆ.
ಇನ್ನು ಶಸ್ತ್ರಚಿಕಿತ್ಸೆ ನಡೆಸಿರುವ ವೈದ್ಯೆ ಡಾಕ್ಟರ್ ಪೂಜಾ ಮೇಲೆ ಸಾರ್ವಜನಿಕರು ಹಿಡಿಶಾಪ ಹಾಕಿದ್ದು ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮುಂದೆ ಯಾವ ತರದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಾದುನೋಡಬೇಕಾಗಿದೆ.
ವರದಿ _ಮಾರುತಿ ಪ್ರಸಾದ್ ತುಮಕೂರು