ಅತಿ ಶೀಘ್ರದಲ್ಲಿ ಅರ್ಹ ರೈತರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು_ಶಾಸಕ ಡಿ .ಸಿ ಗೌರಿಶಂಕರ್.
ತುಮಕೂರು_ಮುಂದಿನ ನಾಲ್ಕೈದು ತಿಂಗಳಿನಲ್ಲಿ ಬಾಕಿ ಉಳಿದಿರುವ ಬಗರ್ ಹುಕುಂ ಜಮೀನುಗಳಿಗೆ ಸಂಬಂಧಿಸಿದಂತೆ ಅರ್ಹ ರೈತರನ್ನು ಗುರುತಿಸಿ ಶ್ರೀಘ್ರದಲ್ಲೇ ರೈತರಿಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ತಿಳಿಸಿದ್ದಾರೆ.
ತುಮಕೂರು ತಾಲ್ಲೂಕು ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಮಿತಿಯ ಸಭೆಯ ನಂತರ ಮಾತನಾಡಿದ ಅವರು ಸರ್ಕಾರದ ಆದೇಶದಂತೆ ಅಧಿಕಾರಿಗಳು ಹಾಗೂ ಸದಸ್ಯರ ನೇತೃತ್ವದಲ್ಲಿ ಬಗರ್ಹುಕುಂ ಕಮಿಟಿ ಸಭೆ ನಡೆದಿದ್ದು ಹಲವು ವರ್ಷಗಳಿಂದ ಗ್ರಾಮೀಣ ಭಾಗದ ರೈತರ ಜಮೀನುಗಳಿಗೆ ಸಂಬಂಧಿಸಿದಂತೆ ಸಾಗುವಳಿ ಚೀಟಿ ನೀಡದ ಕಾರಣ ರೈತರು ತೀರಾ ಸಂಕಷ್ಟಕ್ಕೆ ಈಡಾಗಿದ್ದಾರೆ.
ಸುಮಾರು ಮೂವತ್ತು ನಲವತ್ತು ವರ್ಷಗಳಿಂದ ಬಾಕಿ ಉಳಿದಿರುವ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಅರ್ಹರನ್ನು ಗುರುತಿಸಿ ಸರ್ಕಾರದ ನಿಯಮಾವಳಿಯಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಹಾಗಾಗಿ ಅರ್ಹರನ್ನು ಗುರುತಿಸಿ ಅತಿ ಶೀಘ್ರದಲ್ಲೇ ಸಾಗುವಳಿ ಚೀಟಿ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದ ಅವರು.
ಇದಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು ಶೀಘ್ರದಲ್ಲೇ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವರದಿ _ಮಾರುತಿ ಪ್ರಸಾದ ತುಮಕೂರು