ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

 

ತುಮಕೂರು: ಬಿಕಾಂ ವಿದ್ಯಾರ್ಥಿನಿಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.

 

ತೇಜಾ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಪಾವಗಡದಲ್ಲಿ ಬಿಕಾಂ ಮೊದಲ ವರ್ಷದಲ್ಲಿ ಓದುತ್ತಿದ್ದ ತೇಜಾ ಇದ್ದಕ್ಕಿದ್ದಂತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಗಳ ಸಾವು ಪೋಷಕರಿಗೆ ಆಘಾತ ಉಂಟುಮಾಡಿದ್ದು ಯುವತಿಯ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!