ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದ ರೈತ ಮುಖಂಡ.
ತುಮಕೂರು_ದೇಶಾದ್ಯಂತ ಜುಲೈ 18 ರಿಂದ ಆಹಾರ ಧಾನ್ಯಗಳಾದ ಅಕ್ಕಿ ಜೋಳ ಗೋಧಿ ರಾಗಿ ಸೇರಿದಂತೆ ಮಾಧ್ಯಮ ವರ್ಗದವರು ದಿನನಿತ್ಯ ಬಳಸುವ ಅವಶ್ಯಕತೆ ಇರುವ ವಸ್ತುಗಳ ಮೇಲೆ ಶೇಕಡ 5 ರಷ್ಟು ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು ಕೇಂದ್ರ ಸರ್ಕಾರದ ಧೋರಣೆಯನ್ನ ಖಂಡಿಸಿ ಗುರುವಾರ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ತುಮಕೂರು ಜಿಲ್ಲಾ ಅಕ್ಕಿ ಗಿರಣಿದಾರರ ಸಂಘ ,ಧಾನ್ಯವರ್ಧಕರ ಸಂಘ, ಎಪಿಎಂಸಿ ವರ್ತಕರ ಸಂಘಗ ಭಾರತೀಯ ಕೃಷಿಕ ಸಮಾಜ ನೇತೃತ್ವದಲ್ಲಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ವೇಳೆ ರೈತ ಮುಖಂಡರು ಒಬ್ಬರು ಹಾಗೂ ಇತರೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಒಳಗೆ ನುಗ್ಗಲು ಮುಂದಾದಾಗ ಅದನ್ನು ತಡೆದ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ರೈತ ಮುಖಂಡರೊಬ್ಬರು ಏಕವಚನದಲ್ಲೇ ವಾಗ್ವಾದ ನಡೆಸಿದ ಘಟನೆ ನಡೆಯಿತು.
ಇನ್ನು ರೈತ ಮುಖಂಡರೊಬ್ಬರು ಮಹಿಳಾ ಸಿಬ್ಬಂದಿಯೊಂದಿಗೆ ಏಕವಚನದಲ್ಲೇ ಗದರಿ ಮಹಿಳಾ ಪೊಲೀಸ್ ಸಿಬ್ಬಂದಿಯ ಬಾಯಿ ಮುಚ್ಚಿಸುವ ಪ್ರಯತ್ನ ನಡೆದಿದ್ದು ಇದಕ್ಕೆ ಸ್ಥಳದಲ್ಲೇ ಇದ್ದ ಕೆಲ ಪ್ರತಿಭಟನಾಕಾರರು ಸಹ ರೈತ ಮುಖಂಡನ ನಡೆಗೆ ಬೇಸರ ವ್ಯಕ್ತಪಡಿಸಿದ ಘಟನೆ ನಡೆಯಿತು.
ಇದೇ ಸಂದರ್ಭದಲ್ಲಿ ಘಟನೆಯ ಸೂಕ್ಷ್ಮತೆಯನ್ನು ಅರಿತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮುಂದಾಗಿ ಪರಿಸ್ಥಿತಿಯನ್ನ ತಿಳಿಗೊಳಿಸಿದರು ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ವಾಪಸ್ ಆಗಿದ್ದಾರೆ.
ಅದೇನೇ ಇರಲಿ ಸರ್ಕಾರಿ ಆದೇಶದಂತೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಸಾರ್ವಜನಿಕವಾಗಿ ಈ ರೀತಿ ಕಿರಿಕಿರಿ ಉಂಟು ಮಾಡಿದ್ದಕ್ಕೆ ರೈತ ಮುಖಂಡನ ನಡೆಗೆ ಸಾರ್ವಜನಿಕ ವಲಯದಲ್ಲೂ ಕೂಡ ತೀವ್ರ ಆಕ್ರೋಶ ವ್ಯಕ್ತವಾಗಿದೆ.