ಗಡಿ ಭಾಗದ ಗ್ರಾಮಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾದ_ ಶಾಸಕ ಡಿ.ಸಿ ಗೌರಿಶಂಕರ್.
ತುಮಕೂರು_ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಸಂಗಲಾಪುರ ಗ್ರಾಮ ಹಲವರು ವರ್ಷಗಳಿಂದ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲದೆ ಆ ಭಾಗದ ಗ್ರಾಮಸ್ಥರು ತೀವ್ರ ಹೈರಾಣಾಗಿದ್ದರು.
ಇದನ್ನು ಗಮನಿಸಿರುವ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಅವರು ಹೆಬ್ಬೂರು ಹೋಬಳಿಯ ಸಂಗಲಾಪೂರ ಹಾಗೂ ಅಕ್ಕಪಕ್ಕದ ಗ್ರಾಮ ಸಂಪರ್ಕಿಸುವ ರಸ್ತೆಗಳು ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮುಂದಾಗಿದ್ದು ಗ್ರಾಮದಲ್ಲಿ ರಸ್ತೆ ಚರಂಡಿ ಹಾಗೂ ಜಲಜೀವನ್ ಮಿಷನ್ ಕಾರ್ಯಕ್ರಮದ ಅಡಿಯಲ್ಲಿ ಮನೆ ಮನೆಗೆ ನಲ್ಲಿಗಳನ್ನು ಹಾಕಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇನ್ನು ಸಂಗಲಾಪೂರ ಗ್ರಾಮದಲ್ಲಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ (10 ಕೋಟಿ ರೂಪಾಯಿ ವೆಚ್ಚದಲ್ಲಿ) ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿರುವ ಶಾಸಕ ಡಿ.ಸಿ ಗೌರಿಶಂಕರ್ ಅವರು ಸಂಗ್ಲಾಪುರ ಗ್ರಾಮದಲ್ಲಿ ರಸ್ತೆಗಳು, ಸರಿಯಿಲ್ಲದ ಕಾರಣ ಹಲವು ವರ್ಷಗಳಿಂದ ಈ ಭಾಗದ ರೈತರು ಹೈರಾಣ ಆಗಿದ್ದರು ಅದ ಕಾರಣ ಗಡಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಬೇಕು ಎನ್ನುವುದು ನನ್ನ ಆಶಯವಾಗಿದೆ ಎಂದರು
ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಸಂಗ್ಳಾಪುರ ಗ್ರಾಮದ ಅಭಿವೃದ್ಧಿಗೆ ಇದುವರೆಗೂ ಯಾವುದೇ ಮುಖಂಡರು ಮುಂದಾಗಿರಲಿಲ್ಲ ಆದರೆ ಇಂದು ಗ್ರಾಮದಲ್ಲಿ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಗೆ ಶಂಕುಸ್ಥಾಪನೆ ನೆರವೇರಿಸಿದ್ದು ಮುಂಬರುವ ಒಂದು ವರ್ಷದಲ್ಲಿ 10 ಕೋಟಿ ರೂಪಾಯಿ ವೆಚ್ಚದ ಹೈಟೆಕ್ ಶಾಲಾ ಹಾಗೂ ವಿದ್ಯಾರ್ಥಿ ನಿಲಯದ ಕಟ್ಟಡಗಳು ನಿರ್ಮಾಣವಾಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಪಾಲನೆತ್ರಯ್ಯ, ಬೋರೇಗೌಡ ಲಕ್ಷ್ಮಮ್ಮ ರಘು ಸೇರಿದಂತೆ ಹಲವು ಮುಖಂಡರು ಗ್ರಾಮಸ್ಥರು ಹಾಜರಿದ್ದರು.
ವರದಿ _ಮಾರುತಿ ಪ್ರಸಾದ್ ತುಮಕೂರು