ಐಸಿಸ್ ಉಗ್ರರ ಜತೆ ನಂಟು: ಮನೆ-ಕಾಲೇಜು ಮೇಲೆ NIA ದಾಳಿ, ಭಟ್ಕಳದಲ್ಲಿ ಓಬ್ಬರು ತುಮಕೂರಲ್ಲಿ ಒಬ್ಬನ ವಶ.
ತುಮಕೂರ: ಐಸಿಸ್ ಉಗ್ರ ಸಂಘಟನೆ ಜತೆ ನಂಟಿನ ಶಂಕೆ ಹಿನ್ನೆಲೆ ತುಮಕೂರಿನ ಮರಳೂರು ದಿಣ್ಣೆ ಮೂಲದ ನಿವಾಸಿ ಮನೆ ಮೇಲೆ ಭಾನುವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಎನ್‌ಐಎ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲೂ ಶನಿವಾರ ಮಧ್ಯರಾತ್ರಿ ಇಬ್ಬರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ತುಮಕೂರಲ್ಲಿ ದೆಹಲಿ ಹಾಗೂ ಬೆಂಗಳೂರು ಮೂಲಕ ಎನ್‌ಐಎ ಅಧಿಕಾರಿಗಳ ತಂಡದಿಂದ ದಾಳಿ ಮಾಡಿದೆ. ತುಮಕೂರು ಎಚ್‌ಎಂಎಸ್ ಯುನಾನಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೆಡಿಕಲ್ ವಿದ್ಯಾರ್ಥಿ ತುಮಕೂರಿನ ಮರಳೂರು ದಿಣ್ಣೆಯಲ್ಲಿ ವಾಸವಿದ್ದ ಎನ್ನಲಾಗಿದೆ. ಶಂಕಿತ ವ್ಯಕ್ತಿಯನ್ನು ಎನ್‌ಐಎ ತಂಡ ದಾಳಿ ಮಾಡಿ ವಶಕ್ಕೆ ಪಡೆದಿದೆ, ಈ ಕಾಲೇಜು ಮಾಜಿ ಶಾಸಕ ಡಾ.ರಫೀಕ್ ಅಹ್ಮದ್ ಅವರ ಒಡೆತನದಲ್ಲಿ ಇತ್ತು ಆದರೆ ಕಾಲೇಜನ್ನು 15 ವರ್ಷದ ಹಿಂದೆ ಮುಂಬೈ ಮೂಲದವರಿಗೆ ಕಾಲೇಜು ನೀಡಲಾಗಿತ್ತು ಎನ್ನಲಾಗಿದೆ. ಎಚ್ ಎಂಎಸ್ ಸಂಸ್ಥೆಗೆ ಸೇರಿದ ಕಟ್ಟಡವನ್ನು ಬಾಡಿಗೆ ಪಡೆದು ಮುಂಬೈ ಮೂಲದವರು ಕಾಲೇಜು ನಡೆಸುತ್ತಿದ್ದರು.
ಭಟ್ಕಳದ ಮನೆಯೊಂದರ ಮೇಲೂ ದಾಳಿ ಮಾಡಿರುವ ಎನ್‌ಐಎ ಅಧಿಕಾರಿಗಳು ಯುವಕರಿಬ್ಬರನ್ನ ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಇನ್ನು ಎನ್. ಐ. ಎ ತಂಡ ದೇಶದ 13 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದು ಮದ್ಯಪ್ರದೇಶ , ಗುಜರಾತ್,ಬಿಹಾರ್,ಕರ್ನಾಟಕ,ಮಹಾರಾಷ್ಟ್ರ ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ದಾಳಿ ವೇಳೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.