ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಎರಡು ವರ್ಷ ವಯೋಮಿತಿ ಹೆಚ್ಚಳ ಮಾಡಿ ಸರ್ಕಾರ ಆದೇಶ ಹಿನ್ನಲೆ ಆಕಾಂಕ್ಷಿಗಳ ಸಂತಸ.
ತುಮಕೂರು_ಕಳೆದ ಎರಡು ವರ್ಷದಿಂದ ವಿಶ್ವದಾದ್ಯಂತ ಕರೋನ ಸಾಂಕ್ರಾಮಿಕ ರೋಗ ಇದ್ದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನೇಮಕಾತಿಯಲ್ಲಿ ವಿಳಂಬ ಹಾಗೂ ನಿಯಮದಂತೆ ನೇಮಕಾತಿ ಪ್ರಕ್ರಿಯೆ ನಡೆಯದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ನೇಮಕಾತಿಗಾಗಿ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳು ವಯೋಮಿತಿ ಹೆಚ್ಚಿದ್ದು ವಯೋಮಿತಿ ಹೆಚ್ಚಿದ್ದ ಕಾರಣ ರಾಜ್ಯದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆ ಮತ್ತು ಪೊಲೀಸ್ ಕಾನ್ಸ್ಟೇಬಲ್ ಸಿ ಏ ಆರ್ ಮತ್ತು ಡಿಎಆರ್ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ ಗರಿಷ್ಠ ವಯೋಮಿತಿ ಇಲ್ಲದೆ ಕಂಗಾಲಾಗಿದ್ದರು.
ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದ ಆಕಾಂಕ್ಷಿಗಳು ವಯೋಮಿತಿಯನ್ನ ಎರಡು ವರ್ಷ ಹೆಚ್ಚಳಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರು.
ಇದರ ಹಿನ್ನೆಲೆಯಲ್ಲಿ ಸರ್ಕಾರ 2022 _23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಸಿ ಏ ಆರ್ ಮತ್ತು ಡಿಎಆರ್ (ಒಟ್ಟು ಹುದ್ದೆ 3484 )ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಒಟ್ಟು ಹುದ್ದೆ 1591 ) ಹುದ್ದೆಗಳಿಗೆ ಕನಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಿ ಒಂದು ಬಾರಿಗೆ ಮಾತ್ರ ಆದೇಶ ಮಾಡಿದೆ .
ಪೊಲೀಸ್ ಕಾನ್ಸ್ಟೇಬಲ್ ಆಕಾಂಕ್ಷಿಗಳು ಸರ್ಕಾರದ ಆದೇಶಕ್ಕೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.ಈ ಮೂಲಕ ಪೊಲೀಸ್ ಕಾನ್ಸ್ಟೇಬಲ್ ಆಕಾಂಕ್ಷಿಗಳು ಸರ್ಕಾರಕ್ಕೆ ಧನ್ಯವಾದಗಳು ಅರ್ಪಿಸಿದ್ದಾರೆ .