ಯಶಸ್ವಿಯಾದ ಜೆಡಿಎಸ್ ಜನತಾ ಜಾತ್ರೆ

ಯಶಸ್ವಿಯಾದ ಜೆಡಿಎಸ್ ಜನತಾ ಜಾತ್ರೆ

ತುಮಕೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಳಗೆರೆಯಲ್ಲಿ ಶಾಸಕ ಡಿ.ಸಿ.ಗೌರಿಶಂಕರ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಜನತಾ ಜಾತ್ರೆ ಬಹುತೇಕ ಯಶಸ್ವಿಯಾಗಿದ್ದು, 60 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

 

 

 

 

ಶಾಸಕ ಡಿ.ಸಿ.ಗೌರಿಶಂಕರ್ ರವರ ನೇತೃತ್ವದಲ್ಲಿ ಭಾನುವಾರ ಕ್ಷೇತ್ರದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದ್ದು ಕಾರ್ಯಕ್ರಮವನ್ನು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿದರು.

 

 

 

 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಇಂದು ನಡೆದ ಸಮಾವೇಶ ಇತಿಹಾಸ ನಿರ್ಮಾಣ ಮಾಡಿದ್ದು ಶಾಸಕ ಡಿ.ಸಿ.ಗೌರಿಶಂಕರ್ ರವರ ಮೇಲಿನ ಪ್ರೀತಿ ವಿಶ್ವಾಸದ ಪ್ರತೀಕವಾಗಿ ಕ್ಷೇತ್ರದ ಮೂಲೆಮೂಲೆಯಿಂದ ಹಿರಿಯ ನಾಗರೀಕರು ಮಹಿಳೆಯರು ಹಾಗೂ ಯುವಕರು ಆಗಮಿಸಿದ್ದು, ಈ ಬಾರಿ ಗೌರಿಶಂಕರ್ ರವರ ಗೆಲುವು ನಿಶ್ಚಿತ ಎಂದರು. ಮಾಜಿ ಶಾಸಕ ಬಿ. ಸುರೇಶ್ ಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಅವರು ಕಳೆದ ಲೋಕಸಭಾ ಚುನಾವಣೆಯ ವೇಳೆ ದೇವೇಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಡಿದ ಅವರಿಗೆ ತಕ್ಕ ಪಾಠ ಕಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಮಾಜಿ ಸಿಎಂ ಕುಮಾರಸ್ವಾಮಿಯವರು ರಾಜ್ಯದ ರೈತರ, ಸಾಮಾನ್ಯ ಜನರ ಅಭ್ಯದಯಕ್ಕಾಗಿ ಪಂಚರತ್ನ ಯೋಜನೆಯನ್ನು ರೂಪಿಸಿ ಈಗಾಗಲೇ 85ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಾ ಪಂಚರತ್ನ ಯೋಜನೆಗಳ ಬಗ್ಗೆ ಪ್ರಚಾರ ನಡೆಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಆಶೀರ್ವಾದ ಮಾಡುವುದರ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಶಾಸಕ ಗೌರಿಶಂಕರ್ ಕಂದಾಯ ಮಂತ್ರಿಗಳಾಗುತ್ತಾರೆ ಎಂದು ಹೇಳಿದರು‌.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಶಾಸಕ ಗೌರಿಶಂಕರ್ ಸಂಸ್ಕಾರವಂತ ಯುವಕ, ಕೋವಿಡ್ ನ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಶಾಸಕ ಮಾಡಿರದಂತಹ ಜನೋಪಯೋಗಿ ಕೆಲಸವನ್ನು ಮಾಡಿ ಕ್ಷೇತ್ರದ ಜನರ ಮನಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೌರಿಶಂಕರ್ ರವರ ಗೆಲುವು ಕ್ಷೇತ್ರದ ಜನರ ಗೆಲುವು ಎಂದು ತಿಳಿಸಿದರು.

 

 

 

 

 

ಇನ್ನು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕ ಡಿ.ಸಿ.ಗೌರಿಶಂಕರ್ ತಾವು ಲ್ಷೇತ್ರದ ಸಾಸಕನಾಗಿ ಎಂದೂ ಸಹ ಕೆಲಸ ಮಾಡಿಲ್ಲ ಬದಲಾಗಿ ಕ್ಷೇತ್ರದ ಪ್ರತಿಯೊಂದ ಮನೆಯ ಮಗನಾಗಿ ಕಾರ್ಯ ನಿರ್ವಹಿಸುತ್ತಿದ್ದು, ತಮ್ಮಾವಧಿಯಲ್ಲಿ ಕ್ಷೇತ್ರಕ್ಕೆ 2,800ಕೋಟಿ ರೂಗಳ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ವಿಶೇಷವಾಗಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ವೃಷಭಾವತಿ ನೀರನ್ನು ತಾಲ್ಲೋಕಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಿರುವುದಾಗಿ ತಿಳಿಸಿ ಮುಂದಿನ ಚುನಾವಣೆಯಲ್ಲಿ ತಮ್ಮನ್ನು ಆಶೀರ್ವದಿಸಬೇಕಾಗಿ ಮನವಿ ಮಾಡಿದರು.

 

 

 

 

ಈ ಸಂದರ್ಭದಲ್ಲಿ ಜೆಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ರಾಜ್ಯ ವಕ್ತಾರ ಹಾಲನೂರು ಲೇಪಾಕ್ಷ, ಡಿ.ಸಿ.ವೇಣುಗೋಪಾಲ್, ಜಿ.ಫಾಲನೇತ್ರಯ್ಯ, ಎನ್.ಆರ್.ಹರೀಶ್, ಹಿರೇಹಳ್ಳಿ ಮಹೇಶ್, ಹಾಲನೂರು ಅನಂತ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!