ಅಳಿಯನಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಕಾಂಗ್ರೆಸ್  ಹಿರಿಯ ಮುಖಂಡ ಶಫಿ ಅಹಮದ್ ರಾಜೀನಾಮೆಗೆ ಸಿದ್ಧತೆ……????

ಅಳಿಯನಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಕಾಂಗ್ರೆಸ್  ಹಿರಿಯ ಮುಖಂಡ ಶಫಿ ಅಹಮದ್ ರಾಜೀನಾಮೆಗೆ ಸಿದ್ಧತೆ……???

?

 

ತುಮಕೂರು – 2023ರ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು ಹಲವು ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ದೊರೆತರೆ ಮತ್ತೆ ಕೆಲವರಿಗೆ ಟಿಕೆಟ್ ನಿರಾಕರಣೆಯಾಗಿದ್ದು ಟಿಕೆಟ್ ನಿರೀಕ್ಷೆಯಲ್ಲಿದ್ದ ಕೆಲ ಅಭ್ಯರ್ಥಿಗಳು ಹಾಗೂ ಮುಖಂಡರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ಧ ಸಮರ ಸಾರಿದ್ದು.

 

 

 

ತುಮಕೂರು ನಗರ ವಿಧಾನಸಭಾ ಕ್ಷೇತ್ರ ಚುನಾವಣಾ ಟಿಕೆಟ್ಗೆ ಸಂಬಂಧಿಸಿದಂತೆ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು ಇದರ ನಡುವೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ವಕ್ ಬೋರ್ಡ್ ಅಧ್ಯಕ್ಷ ಇಕ್ಬಾಲ್ ಅಹಮದ್ ರವರಿಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ತುಮಕೂರು ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ.

 

 

ಕಳೆದ ಎರಡು ದಿನಗಳ ಹಿಂದೆ ತುಮಕೂರಿನ ಕಾಂಗ್ರೆಸ್ ಹಿರಿಯ ಮುಖಂಡ ಶಫಿ ಅಹಮದ್ ರವರು ಹಲವು ಕಾರ್ಪೊರೇಟರ್ ಗಳು ಹಾಗೂ ಪಕ್ಷದ ಹಿರಿಯ ಮುಖಂಡರೊಂದಿಗೆ ಪತ್ರಿಕಾಗೋಷ್ಠಿಗೆ ನಡೆಸಿ ಮಾಜಿ ಶಾಸಕ ರಫೀಕ್ ಅಹಮದ್ ರವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು ಇನ್ನು ಟಿಕೆಟ್ ನೀಡದೆ ಇದ್ದಲ್ಲಿ ತಮ್ಮ ನಿರ್ಧಾರವನ್ನ ಪ್ರಕಟಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದ ಶಫಿ ಅಹಮದ್ ರವರು ಇಂದು ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಲು ಸಿದ್ಧತೆ ಕೈಗೊಂಡಿದ್ದಾರೆ ಎನ್ನುವ ಮಾಹಿತಿ ಶಫಿ ಅಹಮದ್  ರವರ ಆಪ್ತ ವಲಯದಲ್ಲಿ ಕೇಳಿ ಬರುತ್ತಿದೆ.

 

 

 

ಇನ್ನು ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ರಫೀಕ್ ಅಹಮದ್ ರವರು ಟಿಕೆಟ್ ಪಡೆಯುವ ನಿಟ್ಟಿನಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದು ಇಂದು ತುಮಕೂರಿಗೆ ಆಗಮಿಸಲಿದ್ದು ನಾಳೆ ಶಫಿ ಅಹಮದ್ ರವರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತೆರಳಿ ತಮ್ಮ ಆಪ್ತರೊಂದಿಗೆ ಡೇರಿ ಸಾಮೂಹಿಕ ರಾಜೀನಾಮೆ ನೀಡಲು ಸಿದ್ಧತೆ ಕೈಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

 

 

 

ಇನ್ನು ಟಿಕೆಟ್ ಪಡೆದ ಖುಷಿಯಲ್ಲಿ ಇರುವ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ರವರಿಗೂ ಸಹ ಶಫಿ ಅಹಮದ್ ರವರ ನಡೆ ತುಂಗಲಾರದ ಬಿಸಿ ತುಪ್ಪದಂತೆ ಆಗಿದ್ದು ನಾಳೆ ಶಫಿ ಅಹಮದ್ ರವರ ನಿರ್ಧಾರ ಪ್ರಕಟಿಸಿ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದ್ದು ಇದರ ಬೆನ್ನಲ್ಲೇ ತುಮಕೂರು ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಯಾವ ಹಂತ ತಲುಪಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

 

 

 

ಇನ್ನು ಟಿಕೆಟ್ ಕೈತಪ್ಪಿರುವ ಮಾಜಿ ಶಾಸಕ ರಫೀಕ್ ಅಹಮದ್ ರವರ ನಡೆ ಸಹ ನಿಗೂಢವಾಗಿದ್ದು ಅವರು ಯಾವ ನಿರ್ಧಾರ ತೆಗೆದುಕೊಂಡು ಬೇರೆ ಪಕ್ಷದ ಕಲಾತಟ್ಟವರು ಅಥವಾ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

 

 

ವರದಿ – ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!