ತುಮಕೂರು ನಗರ ಜೆಡಿಎಸ್ ಅಭ್ಯರ್ಥಿಯಾಗಿ ಸೊಗಡು ಶಿವಣ್ಣ ಕಣಕ್ಕೆ…..???
ತುಮಕೂರು – ಬಿಜೆಪಿ ಪಕ್ಷದಿಂದ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬುಧವಾರ ತುಮಕೂರು ನಗರದಲ್ಲಿ ಕಾರ್ಯಕರ್ತರ ಸಭೆ, ಉದ್ದೇಶಿಸಿ ಮಾತನಾಡಿದ ಶಿವಣ್ಣ ರವರು ಬಿಜೆಪಿ ಪಕ್ಷಕ್ಕೆ ಗುಡ್ ಬಾಯ್ ಹೇಳುವ ನಿರ್ಧಾರವನ್ನು ಪ್ರಕಟಿಸಿದ ಬೆನ್ನಲ್ಲೇ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸೊಗಡು ಶಿವಣ್ಣರವರಿಗೆ ಗಾಳ ಹಾಕಲು ಮುಂದಾಗಿದ್ದಾರೆ.
ಇನ್ನು ರಾಜೀನಾಮೆ ನಿರ್ಧಾರ ಘೋಷಣೆಯಾಗುತ್ತಿದ್ದಂತೆ ಹೆಚ್ ಡಿ ಕುಮಾರಸ್ವಾಮಿ ಹಾಗೂ ಕೆ ಆರ್ ಪಿ ಪಿ ಪಕ್ಷದ ಮುಖಂಡ ಜನಾರ್ಧನ ರೆಡ್ಡಿ ಸೇರಿದಂತೆ ಹಲವು ನಾಯಕರು ಸೊಗಡು ಶಿವಣ್ಣರವರಿಗೆ ದೂರವಾಣಿ ಕರೆ ಮಾಡುವ ಮೂಲಕ ತಮ್ಮ ಪಕ್ಷಕ್ಕೆ ಬರಮಾಡಿಕೊಳ್ಳಲು ಮುಂದಾಗಿದ್ದಾರೆ.
ಜೆಡಿಎಸ್ ಪಕ್ಷದ ಹಲವು ನಾಯಕರು ಸೊಗಡು ಶಿವಣ್ಣರವರ ನಿರಂತರ ಮನವೊಲಿಕೆಗೆ ಮುಂದಾಗಿದ್ದು ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಸೊಗಡು ಶಿವಣ್ಣರವರು ಕಣಕ್ಕೆ ಇಳಿಯಲು ತೆರೆಮರೆಯ ಕಸರತ್ತು ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಎನ್ ಗೋವಿಂದರಾಜು ರವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಮುಖಂಡರ ಕೆಂಗಣ್ಣಿಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಗೋವಿಂದರಾಜು ರವರ ಗೆಲುವಿಗೂ ಸಹ ಕಷ್ಟ ಎನ್ನಲಾಗುತ್ತಿದ್ದ ಬೆನ್ನಲ್ಲೇ ಸೊಗಡು ಶಿವಣ್ಣರವರು ತುಮಕೂರು ನಗರ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಸುದ್ದಿ ಜೆಡಿಎಸ್ ಪಕ್ಷದ ವಲಯದಲ್ಲಿ ಕೇಳಿ ಬರುತ್ತಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ಒಂದು ವೇಳೆ ಸೊಗಡು ಶಿವಣ್ಣರವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದಾದರೆ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಿಸಲು ಮುಂದಾಗಿದ್ದಾರೆ ಎನ್ನುಲಾಗುತ್ತಿದ್ದು ಆ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರವರ ಸೋಲಿನ ರಾಜಕೀಯ ಸೇಡನ್ನು ಸಂಸದ ಜಿಎಸ್ ಬಸವರಾಜು ಹಾಗೂ ಶಾಸಕ ಜ್ಯೋತಿ ಗಣೇಶ್ ರವರ ಮೇಲಿನ ಸೇಡನ್ನ ತೀರಿಸಿಕೊಳ್ಳುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯುವ ಚಾಣಾಕ್ಷತನವನ್ನು ತೋರಲು ಮುಂದಾಗಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಜೆಡಿಎಸ್ ಪಕ್ಷದಿಂದ ಸೊಗಡು ಶಿವಣ್ಣ ರವರು ಕಣಕ್ಕೆ ಇಳಿಯಲು ಮುಂದಾದರೆ ಹಾಲಿ ಶಾಸಕ ಜ್ಯೋತಿ ಗಣೇಶ್ ರವರಿಗೂ ಸಹ ಗೆಲುವು ಕಷ್ಟವಾಗಲಿದೆ ಎನ್ನುವ ಮಾತು ಸಹ ಕ್ಷೇತ್ರದಾದ್ಯಂತ ಕೇಳಿ ಬರುತ್ತಿದ್ದು.
ಮುಂದಿನ ಎಲ್ಲಾ ಬೆಳವಣಿಗೆಗಳು ಮಾಜಿ ಸಚಿವ ಸೊಗಡು ಶಿವಣ್ಣ ರವರ ಮೇಲಿದ್ದು ತಮ್ಮ ನಿರ್ಧಾರ ಏನು ಎನ್ನುವುದನ್ನು ಶೀಘ್ರದಲ್ಲೇ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
ವರದಿ – ಮಾರುತಿ ಪ್ರಸಾದ್ ತುಮಕೂರು