ಯುಪಿಎಸ್ಸಿ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿದ್ದ ಯುವತಿ ಆತ್ಮಹತ್ಯೆ.

ಯುಪಿಎಸ್ಸಿ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿದ್ದ ಯುವತಿ ಆತ್ಮಹತ್ಯೆ.

 

 

 

ತುಮಕೂರು – ಯುಪಿಎಸ್ಸಿ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿದ್ದ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

 

 

 

 

ತುಮಕೂರು ನಗರದ ಭನಶಂಕರಿ 2ನೇ ಹಂತದ ಶಾಂತಿನಗರದಲ್ಲಿ ವಾಸವಿದ್ದ ಮಧುಶ್ರೀ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ .ಇತ್ತೀಚಿಗೆ ಪದವಿ ಮುಗಿಸಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿದ್ದರು.

 

 

 

 

ಮನೆಯಲ್ಲಿ ಯಾರು ಇಲ್ಲದ ವೇಳೆ ಮಂಗಳವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದು ಹೊರ ಹೋಗಿದ್ದ ಕುಟುಂಬಸ್ಥರು ಮನೆಗೆ ಆಗಮಿಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

 

 

 

ಯುವತಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 

ವರದಿ -ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version