ತುಮಕೂರಿನ ಹೇಮಾವತಿ ನಾಲಾ ಕಚೇರಿಯಲ್ಲಿನ ವಿಶೇಷ ಭೂ ಸ್ವಾಧಿನ ಅಧಿಕಾರಿಗಳ ಕಛೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ.
ಸೋಮವಾರ ಸಂಜೆ ತುಮಕೂರಿನ ಹೇಮಾವತಿ ನಾಲಾ ವಲಯ ಕಚೇರಿಯಲ್ಲಿ ಇರುವ ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಚೇರಿಯಲ್ಲಿ (ಕಾವೇರಿ ನೀರಾವರಿ ನಿಗಮ ನಿಯಮಿತ) ಕಚೇರಿಯಲ್ಲಿ ಸೋಮವಾರ ಸಂಜೆ ಎಸಿಬಿಯ ಡಿವೈಎಸ್ಪಿ ಮಲ್ಲಿಕಾರ್ಜುನ್ ಇನ್ಸ್ಪೆಕ್ಟರ್ ವಿಜಯಲಕ್ಷ್ಮಿ ನೇತೃತ್ವದ ತಂಡ ದಾಳಿ ಸುಮಾರು ಹತ್ತಕ್ಕೂ ಹೆಚ್ಚು ಅಧಿಕಾರಿಗಳು ದಿಢೀರ್ ತಂಡ ದಿಢೀರ್ ದಾಳಿ ನಡೆಸಿದೆ.
ಇಲಾಖೆಯಲ್ಲಿ ನಡೆಯುತ್ತಿದ್ದ ಸಾಕಷ್ಟು ಭ್ರಷ್ಟಾಚಾರಗಳ ಬಗ್ಗೆ ಸಾಕಷ್ಟು ದಿನಗಳಿಂದ ದೂರುಗಳು ಹಾಗೂ ಕಚೇರಿಯಲ್ಲಿ ನಡೆಯುತ್ತಿದ್ದ ಅವ್ಯವಹಾರಗಳ ಬಗ್ಗೆ ಹನುಮಾನ ಎಸಿಬಿ ಇಲಾಖೆಗೆ ಬಂದಿತ್ತು.
.
ಇದಕ್ಕೆ ಸಂಬಂಧಿಸಿದಂತೆ ಸೋಮವಾರ ಸಂಜೆ 4.30 ರ ವೇಳೆಯಲ್ಲಿ ಎಸಿಬಿ ಅಧಿಕಾರಿಗಳು ತುಮಕೂರಿನ ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಚೇರಿಗೆ ದಾಳಿ ನಡೆಸಿದ್ದಾರೆ.
ಕಚೇರಿಯಲ್ಲಿರುವ ಪ್ರತಿ ದಾಖಲಾತಿಗಳ ಪರಿಶೀಲನೆ ತಡರಾತ್ರಿಯವರೆಗೂ ಮುಂದುವರೆದಿತ್ತು ಮಂಗಳವಾರ ಬೆಳಗ್ಗೆ ಮತ್ತೆ ದಾಖಲೆಗಳ ಪರಿಶೀಲನೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.
ಇನ್ನು ಇಲಾಖೆಯಲ್ಲಿ ಭೂಸ್ವಾಧೀನ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಇಲಾಖೆಗೆ ಬಂದಿದ್ದವು , ಇನ್ನು ಇಲಾಖೆಯ ಅಧಿಕಾರಿಗಳು ಸಾಕಷ್ಟು ಭ್ರಷ್ಟಾಚಾರದಲ್ಲಿ ತೊಡಗಿದ್ದು ಅಧಿಕಾರಿಗಳನ್ನು ನಡೆ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.
ಇನ್ನು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕೋರ್ಟ್ ಆದೇಶದ ಮೂಲಕ ಫಲಾನುಭವಿಗಳಿಗೆ ಹಣ ಮಂಜೂರಾತಿ ಮಾಡಲು ವಿಳಂಬ ಮಾಡುತ್ತಿದ್ದಾರೆ ಇನ್ನು ಎಲ್ಐಸಿ ಕೇಸ್ ಸೇರಿದಂತೆ ಹಲವು ಕೆಲಸಗಳಿಗೆ ರೈತರು ಹಾಗೂ ಅರ್ಜಿದಾರರಿಂದ ಯಾರು ಲಂಚ ನೀಡುವಂತಹ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ ಕಮಿಷನ್ ಪಡೆಯುತ್ತಿದ್ದರು ಹಣ ನೀಡುತ್ತಿದ್ದ ಅರ್ಜಿದಾರರ ಕೆಲಸ ಬೇಗ ಆಗುತ್ತಿತ್ತು ಆದರೆ ಬಡವರು ಹಾಗೂ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ ಬಡವರಿಗೆ ಇದರಿಂದ ಹಾಗೂ ಅಧಿಕಾರಿಗಳ ನಡೆಯಿಂದ ಸಾಕಷ್ಟು ಅನ್ಯಾಯ ಆಗುತ್ತಿತ್ತು.
ಇನ್ನು ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ಅವರಿಗೆ ತಲುಪಬೇಕಾದ ಹಣ ತಲುಪುವಲ್ಲಿ ಅಧಿಕಾರಿಗಳು ಸಾಕಷ್ಟು ಪಾಲು ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಇನ್ನು ಇಲಾಖೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರೈತರು ಹಾಗೂ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿತ್ತು .
ಇದಕ್ಕೆ ಸಂಬಂಧಿಸಿದಂತೆ ಸೋಮವಾರ ಸಂಜೆ ಎಸಿಬಿ ದಾಳಿ ನಡೆದಿದ್ದು ಸೋಮವಾರ ತಡರಾತ್ರಿ ಇಲಾಖೆಯ ಕಚೇರಿಯನ್ನು ಸೀಲ್ ಮಾಡಿ ಸಂಪೂರ್ಣ ವಶಕ್ಕೆ ತೆಗೆದುಕೊಂಡಿದ್ದು ಮಂಗಳವಾರ ಬೆಳಗ್ಗೆ ಅಧಿಕಾರಿಗಳ ತಂಡ ಪರಿಶೀಲನೆ ಕೈಗೊಳ್ಳುವುದಾಗಿ ಮಾಹಿತಿ ತಿಳಿದು ಬಂದಿದೆ.