ಪಾವಗಡ ಖಾಸಗಿ ಬಸ್​ ದುರಂತ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳು ಬೆಂಗಳೂರಿಗೆ  ರವಾನೆ.

ಪಾವಗಡ ಖಾಸಗಿ ಬಸ್​ ದುರಂತ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳು ಬೆಂಗಳೂರಿಗೆ  ರವಾನೆ_ಜಿಲ್ಲಾ ಶಸ್ತ್ರ  ಚಿಕಿತ್ಸಕ ವೀರಭದ್ರಯ್ಯ

 

 

ತುಮಕೂರಿನ ಪಾವಗಡದಲ್ಲಿ ನಡೆದ ಖಾಸಗಿ ಬಸ್​ ದುರಂತದಲ್ಲಿ ಗಾಯಗೊಂಡ ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು ಈ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕ ವೀರಭದ್ರಯ್ಯ ಅವರ ಹೇಳಿಕೆ ನೀಡಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ಎಲ್ಲಾ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ವೈದ್ಯಕೀಯ ಸಿಬ್ಬಂದಿ ನಿರತರಾಗಿದ್ದಾರೆ ಎಂದರು.

 

 

ಇನ್ನೂ ಗಂಭೀರವಾಗಿ ಗಾಯಗೊಂಡ ರೋಗಿಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಸೇರಿದಂತೆ ತುಮಕೂರಿನ ಖಾಸಗಿ ಮೆಡಿಕಲ್ ಕಾಲೇಜಿನ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವಶ್ಯಕತೆ ಕಂಡು ಬಂದಲ್ಲಿ ಸ್ಥಳೀಯ ಮೆಡಿಕಲ್ ಕಾಲೇಜುಗಳಿಗೆ ರೋಗಿಗಳನ್ನು ಸ್ಥಳಾಂತರಿಸಲಾಗುವುದು , ಇನ್ನು ಗಂಭೀರ ಸ್ಥಿತಿಯಲ್ಲಿರುವ ಹಾಗೂ ಹೆಚ್ಚಿನ ಚಿಕಿತ್ಸೆ ಅವಶ್ಯಕವಿರುವ ರೋಗಿಗಳನ್ನು ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಸಕಲ ರೀತಿಯ ಸಿದ್ಧತೆಗಳು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

 

 

ವರದಿ_ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version