ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ್ ಹೆಸರಿನಲ್ಲಿ ತಿಥಿ ಕಾರ್ಡ್ ತಯಾರಿಸಿ ವಿಕೃತಿ .
ತುಮಕೂರು: ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಬದುಕಿದ್ದರೂ ಅವರ ಫೋಟೋ ಸಹಿತ ತಿಥಿ ಕಾರ್ಡ್ ತಯಾರಿಸಿ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿ ವಿಕೃತಿ ಮೆರೆಯಲಾಗಿದೆ.
ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದರು. ಈ ಬಗ್ಗೆ ಎಚ್‌ಡಿಕೆ ಗರಂ ಆಗಿದ್ದರು. ಶನಿವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಶ್ರೀನಿವಾಸ್, ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ ಬಂದು ಸ್ಪಧಿಸಿ ಗೆಲ್ಲಲಿ. ಅವನು ಗೆದ್ದರೆ ನನ್ನ ಜೀವನ ಪೂರ ಆತನ ಮನೆಯಲ್ಲೇ ಕೂಲಿ ಕೆಲಸ ಮಾಡುವೆ ಎಂದು ಓಪನ ಚಾಲೆಂಜ್ ಮಾಡಿದ್ದರು. ಅಷ್ಟೇ ಅಲ್ಲ, ಇಂದು ತುಮಕೂರಲ್ಲಿ ಶ್ರೀನಿವಾಸ್ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್ ಪರ ಇವರ ಅಭಿಮಾನಿಗಳೂ ಪ್ರತಿಭಟನೆ ನಡೆಸಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಶ್ರೀನಿವಾಸ್ ಹೆಸರಲ್ಲಿ ತಿಥಿ ಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಫೇಸ್‌ಬುಕ್‌ನಲ್ಲಿ ಪ್ರಚಂಡ ಭೈರವ ಹೆಸರಿನ ಖಾತೆಯಿ ತಿಥಿ ಕಾರ್ಡ್ ಅಪ್‌ಲೋಡ್ ಆಗಿದ್ದು, ಹಲವರಿಗೆ ಟ್ಯಾಗ್ ಮಾಡಲಾಗಿದೆ. ಈ ಕಾರ್ಡ್ ಸಾಮಾಜಿಕ ಜಾಲತಾಣರ ವೈರಲ್ ಆಗಿದೆ. ಜೂನ್ 10ರಂದು ನಿಧನರಾಗಿದ್ದಾರೆ. ಜೂನ್ 21ರಂದು ಸ್ವಕ್ಷೇತ್ರ ಗುಬ್ಬಿಯಲ್ಲಿ ಕೈಲಾಸ ಸಮಾರಾಧಾನೆ ನಡೆಯಲಿದೆ ಎಂದು ಬರೆಯಲಾಗಿದೆ ಶ್ರೀನಿವಾಸ್ ಅಭಿಮಾನಿಗಳು ಇದನ್ನು ನೋಡಿ ವಿಕೃತಿ ಮೆರೆದವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನು ಸಾರ್ವಜನಿಕ ವಲಯದಲ್ಲೂ ಸಹ ತಿಥಿ ಕಾರ್ಡ್ ಮೂಲಕ ತೇಜೋವಧೆಗೆ ಒಬ್ಬ ಶಾಸಕರ ಹೆಸರನ್ನು ಬಳಸಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇಷ್ಟು ದಿನ ಗುಬ್ಬಿ ಶಾಸಕ ಹೆಸರು ಶ್ರೀನಿವಾಸ್ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು ಈಗ ಬಹಿರಂಗವಾಗಿಯೇ ಇಬ್ಬರು ನಾಯಕರು ಏಕವಚನದ ಪದ ಪ್ರಯೋಗ ಮಾಡುವ ಮೂಲಕ ಒಬ್ಬರಮೇಲೊಬ್ಬರು ಕಿಡಿಕಾರುತ್ತಿದ್ದಾರೆ.
ಇಷ್ಟೆಲ್ಲಾ ಗೊಂದಲಗಳ ನಡುವೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ತೀವ್ರ ಗೊಂದಲದಲ್ಲಿ ಇರುವುದಂತೂ ಸತ್ಯ.