ಸಮಾಜದ ಅಸಮತೋಲನವನ್ನು ನಿವಾರಿಸಲು ಅಂಬೇಡ್ಕರ್ ಅವರ ಆದರ್ಶವನ್ನು ಪಾಲಿಸಿ : ಶಾಸಕ ಜಿ.ಬಿ. ಜ್ಯೋತಿಗಣೇಶ್

 

ತುಮಕೂರು

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶವನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಸಮಾಜದಲ್ಲಿರುವ ಅಸಮತೋಲನವನ್ನು ನಿವಾರಿಸಲು ಮುಂದಾಗಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಕರೆ ನೀಡಿದರು.

 

 

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೦ನೇ ಜಯಂತಿ ಕಾರ್ಯಕ್ರಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರು ಬರೆದ ಸಂವಿಧಾನದಿoದ ದೇಶದ ಪ್ರತಿಯೊಬ್ಬರಿಗೂ ಸ್ಥಾನಮಾನ ದೊರೆತಿದೆ. ಇದಕ್ಕೆ ಪ್ರಮುಖ ಕಾರಣ ಅಂಬೇಡ್ಕರ್‌ರವರು. ತುಳಿತಕ್ಕೆ ಒಳಪಟ್ಟ ಜನಾಂಗ ಸಮಾಜದ ಮುಖ್ಯವಾಹಿನಿಗೆ ಬರಲು ಅಂಬೇಡ್ಕರ್‌ರವರ ಸಂವಿಧಾನವೇ ಬಹುಮುಖ್ಯ ಕಾರಣವಾಗಿದೆ. ಹಾಗಾಗಿ ಅಂಬೇಡ್ಕರ್‌ರವರ ತತ್ವಾದರ್ಶ, ಸಿದ್ದಾಂತವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಮಾತನಾಡಿ, ಅಂಬೇಡ್ಕರ್‌ರವರ ಸಂವಿಧಾನದ ಅಡಿಯಲ್ಲಿ ಸರ್ಕಾರಗಳು ನಿರ್ಧಾರ ತೆಗೆದುಕೊಳ್ಳುವಂತಹ ಮಹತ್ವದ ಕೆಲಸಗಳು ಆಗುತ್ತಿವೆ. ಪ್ರಜಾಪ್ರಭುತ್ವ ನಿಲ್ಲಬೇಕಾದರೆ ಸಮಾನತೆ ಅಗತ್ಯವಿದೆ. ಪ್ರತಿಯೊಬ್ಬರಿಗೂ ಸಮಾನತೆಯ ಹಕ್ಕಿದೆ ಎಂಬುದನ್ನು ಅಂಬೇಡ್ಕರ್ ಸಂವಿಧಾನದಲ್ಲಿ ಹೇಳಿದ್ದಾರೆ ಎಂದರು.

ಅAಬೇಡ್ಕರ್‌ರವರಿಗೆ ಇದ್ದ ಅಗಾಧವಾದ ಜ್ಞಾನದಿಂದ ಸಂವಿಧಾನ ರಚಿಸುವಂತಹ ಅತ್ಯಂತ ಮುಖ್ಯ ಹುದ್ದೆ ನಿಭಾಯಿಸುವಂತಹ ಅವಕಾಶ ದೊರೆಯಿತು. ೧೯೪೭ರ ನಂತರ ಅತ್ಯಂತ ಪ್ರಭಾವಿತ ವ್ಯಕ್ತಿ ಯಾರು ಎಂದು ಸರ್ವೆ ಮಾಡಿದ ಸಂದರ್ಭದಲ್ಲಿ ಅತ್ಯಂತ ಪ್ರಭಾವಿತರು ಎಂಬ ಸಾಲಿನಲ್ಲಿ ನಿಂತವರು ಅಂಬೇಡ್ಕರ್ ಅವರು. ಇವರನ್ನು ಗೌರವಿಸದಂತಹ ವ್ಯಕ್ತಿಗಳೇ ಇಲ್ಲ ಎಂದರು.

ಅಂಬೇಡ್ಕರ್‌ರವರ ಕೊಡುಗೆಯ ಬಗ್ಗೆ ಬಹಳಷ್ಟು ಮಂದಿಗೆ ತಿಳಿದಿಲ್ಲ. ಹಾಗಾಗಿ ಹಳ್ಳಿಹಳ್ಳಿಗೂ ಇವರ ಕೊಡುಗೆ ಬಗ್ಗೆ ಪ್ರಚಾರ ಕಾರ್ಯ ಆಗಬೇಕಾಗಿದೆ. ಇವರ ತತ್ವಾದರ್ಶಗಳ ಪಾಲನೆ ಜಯಂತಿಗೆ ಸೀಮಿತವಾಗದೆ ಪ್ರತಿಯೊಬ್ಬರು ಅವರ ತತ್ವಾದರ್ಶ ಪಾಲನೆಗೆ ಒತ್ತು ನೀಡಬೇಕು ಎಂದು ಅವರು ಹೇಳಿದರು.

 

ಇದೇ ಸಂದರ್ಭದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.

 

ಈ ಸಂದರ್ಭದಲ್ಲಿ ಮೇಯರ್ ಬಿ.ಜಿ. ಕೃಷ್ಣಪ್ಪ, ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿ.ಪಂ. ಸದಸ್ಯ ವೈ.ಹೆಚ್. ಹುಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ. ಜಿ.ಪಂ. ಸಿಇಓ ವಿದ್ಯಾಕುಮಾರಿ ಕೆ, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಮೋಹನ್‌ಕುಮಾರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮ, ಡಿಹೆಚ್‌ಓ ಡಾ|| ನಾಂಗೇOದ್ರಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಸಮುದಾಯ ಮುಖಂಡರುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version