ರಾಜಕೀಯಕ್ಕೆ ಎಂಟ್ರಿ ಕೊಟ್ಟ ದೇವೇಗೌಡರ ಮತ್ತೊಂದು ಕುಡಿ
ಹಾಸನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ ಅಥವಾ ರೇವಣ್ಣ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡರು ಅಭ್ಯರ್ಥಿ ಆಯ್ಕೆ ಬಗ್ಗೆ ಜಿಲ್ಲೆಯ ಶಾಸಕರ ಜೊತೆ ಸಭೆ ನಡೆಸಿದ್ದರು. ಕೆಲವು ಶಾಸಕರು ಸಹ ಡಾ. ಸೂರಜ್ ರೇವಣ್ಣಗೆ ಟಿಕೆಟ್ ನೀಡಬೇಕು ಎಂದು ಒತ್ತಾಯ ಮಾಡಿದ್ದರು. ಅಂತಿಮವಾಗಿ ಪಕ್ಷ ಸೂರಜ್ ರೇವಣ್ಣ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. 2020ರಲ್ಲಿ ಹಾಸನ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಡಾ. ಸೂರಜ್ ರೇವಣ್ಣ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡುವ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಶುಕ್ರವಾರ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಸೂರಜ್ ಈಗಾಗಲೇ ಧರ್ಮಸ್ಥಳಕ್ಕೆ ತೆರಳಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ