ತುಮಕೂರನಲ್ಲಿ ಮತ್ತೊಂದು ಖಾಸಗಿ ಬಸ್ ದುರಂತ , ಬಸ್ ನಲ್ಲಿ ಇದ್ದ ಪ್ರಯಾಣಿಕರಿಗೆ ಗಾಯ

ತುಮಕೂರನಲ್ಲಿ ಮತ್ತೊಂದು ಖಾಸಗಿ ಬಸ್ ದುರಂತ , ಬಸ್ ನಲ್ಲಿ ಇದ್ದ ಪ್ರಯಾಣಿಕರಿಗೆ ಗಾಯ

 

 

ತುಮಕೂರು : ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತವಾಗಿದ್ದು, ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

 

ಇಂದು ಬೆಳಗಿನ ಜಾವ 3.50 ರ ಸುಮಾರಿಗೆ ತುಮಕೂರು ಹೊರವಲಯದ ಅಂತರಸನಹಳ್ಳಿ ರಾಷ್ಟ್ರೀಯ ಹೆದ್ದಾರಿ 48 ರ ಬಳಿಯ ರಂಗಪುರಬಳಿ ಘಟನೆ ಸಂಭವಿಸಿದೆ. ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 5ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

 

 

ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಖಾಸಗಿ ಬಸ್ ಸೊರಬದಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version