ಕಾಂಗ್ರೆಸ್ ಪಕ್ಷದಿಂದ ತುಮಕೂರು ವಿಧಾನಸಭಾ ಟಿಕೆಟ್ ಗಾಗಿ ಕೆಪಿಸಿಸಿ ಕಚೇರಿಗೆ ಅರ್ಜಿ ಸಲ್ಲಿಕೆ_ಅತಿಕ್ ಅಹಮದ್.

ಕಾಂಗ್ರೆಸ್ ಪಕ್ಷದಿಂದ ತುಮಕೂರು ವಿಧಾನಸಭಾ ಟಿಕೆಟ್ ಗಾಗಿ ಕೆಪಿಸಿಸಿ ಕಚೇರಿಗೆ ಅರ್ಜಿ ಸಲ್ಲಿಕೆ_ಅತಿಕ್ ಅಹಮದ್.

 

ತುಮಕೂರು_2023ರ ಚುನಾವಣೆ ಸಂಬಂಧ ತುಮಕೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಆಕಾಂಕ್ಷಿ ಯಾದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಅತಿಕ್ ಅಹಮದ್ ರವರು ಕೆಪಿಸಿಸಿ ಕಚೇರಿಗೆ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.

 

 

 

ಈ ಬಗ್ಗೆ ಮಾಹಿತಿ ನೀಡಿರುವ ಅವರು 2013 ಹಾಗೂ 2018ರ ಚುನಾವಣೆಗೂ ಸಹ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದು ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು, ಆದರೆ ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಸಕ್ರಿಯನಾಗಿ ಪಾಲ್ಗೊಂಡಿರುವ ನಾನು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಘಟಿಸುವಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿದ್ದು ಈ ಬಗ್ಗೆ ಪಕ್ಷದ ವರಿಷ್ಠರು ತಮಗೆ ಟಿಕೆಟ್ ನೀಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ.

 

 

 

ಕಳೆದ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕರಾಗಿದ್ದ ರಫೀಕ್ ಅಹಮದ್ ರವರು ಚುನಾವಣೆಯಲ್ಲಿ ಟಿಕೆಟ್ ಪಡೆದು ಸ್ಪರ್ಧಿಸಿದರು ಆ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಹೇಳಿದ ಮಾತಿಗೆ ಚಾಚು ತಪ್ಪದೇ ಕೆಲಸ ನಿರ್ವಹಿಸುತ್ತಾ ಪಕ್ಷದ ನಿಯಮದಂತೆ ಇಲ್ಲಿಯವರೆಗೂ ಕೆಲಸ ನಿರ್ವಹಿಸಿದ್ದು ಜಿಲ್ಲೆ ಹಾಗೂ ನಗರದಾದ್ಯಂತ ಪಕ್ಷವನ್ನ ಸಂಘಟಿಸಿದ್ದೇನೆ ಇನ್ನು ಕಳೆದ ಮೇ ತಿಂಗಳಲ್ಲಿ ತುಮಕೂರು ನಗರದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಬೃಹತ್ ಸಮಾವೇಶವನ್ನು ಸಹ ಆಯೋಜಿಸಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿರುವ ಬಗ್ಗೆ ಮಾಹಿತಿ ತಿಳಿಸಿದರು.

 

 

 

ತುಮಕೂರು ಜಿಲ್ಲೆಯ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳನ್ನು ಸಹ ಪಕ್ಷವನ್ನ ಸಂಘಟಿಸುವ ಸಲುವಾಗಿ ಕೆಲಸ ನಿರ್ವಹಿಸಿದ್ದು ಪಕ್ಷದ ಚೌಕಟ್ಟಿನಲ್ಲಿ ಯಾವುದೇ ಲೋಪದೋಷ ಬಾರದಂತೆ ಕಾಂಗ್ರೆಸ್ ಪಕ್ಷದಿಂದ ಸಾಕಷ್ಟು ಹೋರಾಟಗಳನ್ನು ಸಹ ಮಾಡಿದ್ದು ತುಮಕೂರು ನಗರವನ್ನ ಮಾದರಿ ನಗರವನ್ನಾಗಿ ಮಾಡಬೇಕು ಎನ್ನುವುದು ನನ್ನ ಮೂಲ ಉದ್ದೇಶ ಹಾಗಾಗಿ ತುಮಕೂರು ನಗರದಲ್ಲಿ ಸಾರ್ವಜನಿಕರಿಗೆ ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಯುವ ಸಮೂಹವನ್ನು ಸಂಘಟಿಸಿ ಸ್ಥಳೀಯವಾಗಿರುವ ಕಾರ್ಖಾನೆಗಳು ಹಾಗೂ ಕಂಪನಿಗಳನ್ನು ಬಳಸಿಕೊಂಡು ಯುವ ಸಮುದಾಯಕ್ಕೆ ಉದ್ಯೋಗ ಕಲ್ಪಿಸಿ ಕೊಡಬೇಕು ಎಂಬುದು ನನ್ನ ಮೊದಲ ಆದ್ಯತೆ ಹಾಗಾಗಿ ಈ ಬಾರಿ ಪಕ್ಷದ ವರಿಷ್ಠರು ತಮಗೆ ಟಿಕೆಟ್ ಭರವಸೆ ಇದ್ದು ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!