ಪೆದ್ದನಹಳ್ಳಿ ದಲಿತ ಯುವಕರ ಹತ್ಯೆ ನಿಷ್ಪಕ್ಷವಾದ ತನಿಖೆ ನಡೆಯುತ್ತೆ_ಗೃಹ ಸಚಿವ ಆರಗ ಜ್ಞಾನೇಂದ್ರ.

ಪೆದ್ದನಹಳ್ಳಿ ದಲಿತ ಯುವಕರ ಹತ್ಯೆ ನಿಷ್ಪಕ್ಷವಾದ ತನಿಖೆ ನಡೆಯುತ್ತೆ_ಗೃಹ ಸಚಿವ ಆರಗ ಜ್ಞಾನೇಂದ್ರ.

 

 

ತುಮಕೂರು _ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಯಲ್ಲಿ ನಡೆದ ದಲಿತ ಯುವಕರ ಹತ್ಯೆ ಪ್ರಕರಣದ ತನಿಖೆ ನಿಷ್ಪಕ್ಷವಾಗಿ ನಡೆಯುತ್ತದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

 

 

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪೆದ್ದನಹಳ್ಳಿ ದಲಿತರ ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೂ ಸಹ ಸಂಪೂರ್ಣ ಮಾಹಿತಿ ಇದ್ದು ದಲಿತ ಯುವಕರ ಹತ್ಯೆ ಆಗಿರುವುದು ನಿಜ. ಇನ್ನು ಪ್ರಕರಣದಲ್ಲಿ ಭಾಗಿಯಾದ ಸುಮಾರು 22 ಮಂದಿಯನ್ನು ಬಂಧಿಸಿದ್ದು.

 

 

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ಸಹ ಪ್ರತಿದಿನದ ಮಾಹಿತಿ ಸಹ ತಮಗೆ ನೀಡುತ್ತಿದ್ದು ಪೊಲೀಸ್ ಇಲಾಖೆಯವರು ಯಾವುದೇ ಮುಲಾಜಿಲ್ಲದೆ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದರು.

 

 

 

ಇನ್ನು ಹತ್ಯೆ ಯಾವ ಕಾರಣಕ್ಕಾಗಿ ಎಂದು ಗೊತ್ತಿಲ್ಲ ಪ್ರಕರಣದ ತನಿಖೆ ನಡೆಯುತ್ತಿದ್ದು ಈಗಲೇ ಕಾರಣ ಏನು ಎಂಬುದನ್ನು ತಿಳಿಸಲು ಸಾಧ್ಯವಿಲ್ಲ ಎಂದರು.

 

 

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಪೆದ್ದನಹಳ್ಳಿ ಗ್ರಾಮದ ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಪೆದ್ದನಹಳ್ಳಿ ಗ್ರಾಮಕ್ಕೆ ಭೇಟಿ ನೀಡದೇ ಇರುವ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ ಅದರ ಬಗ್ಗೆ ತನಿಖೆ ಮುಂದುವರೆಯುತ್ತದೆ ಇನ್ನು ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಯಾವುದೇ ಪ್ರಭಾವಕ್ಕೆ ಒಳಗಾಗದೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದಷ್ಟೇ ತಿಳಿಸಿದ ಗೃಹ ಸಚಿವರು ಸೌಜನ್ಯಕ್ಕಾದರೂ ಮುಂದಿನ ದಿನದಲ್ಲಿ ದಲಿತ ಯುವಕರ ಮನೆಗಳಿಗೆ ಭೇಟಿ ನೀಡುವ ಬಗ್ಗೆ ತಿಳಿಸದೆ ತೆರಳಿರುವುದು  ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಎಡೆ ಮಾಡಿದೆ.

 

 

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಸಾಕಷ್ಟು ರಾಜಕಾರಣಿಗಳು, ವಿರೋಧ ಪಕ್ಷದ ನಾಯಕರು ಹಾಗೂ ದಲಿತ ಪರ ಸಂಘಟನೆಗಳು ಸಹ ಇದುವರೆಗೂ ಜಿಲ್ಲೆಯಲ್ಲಿ ಮೂರು ಜನ ಮಂತ್ರಿಗಳು ಇದ್ದರೂ ಸಹ ಸೌಜನ್ಯಕ್ಕಾದರೂ ಯುವಕರ ಮನೆಗಳಿಗೆ ಭೇಟಿ ನೀಡಿ ದೈರ್ಯ ತುಂಬುವ ಕೆಲಸಗಳನ್ನು ಮಾಡದೆ ಇರುವ ಬಗ್ಗೆ ಸಾಕಷ್ಟು ಆಕ್ರೋಶ ಹೊರ ಹಾಕಿದ್ದಾರೆ ಆದರೆ ಗೃಹ ಸಚಿವರು ನೀಡಿರುವ ಹೇಳಿಕೆ ಮುಂದಿನ ದಿನದಲ್ಲಿ ಯಾವರೀತಿಯ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಕಾದುನೋಡಬೇಕಾಗಿದೆ.

 

 

ವರದಿ _ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version