ಬಿಜೆಪಿ ಜೆಡಿಎಸ್ ಮೈತ್ರಿ ಇಂದ ಬರಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ.

ಬಿಜೆಪಿ ಜೆಡಿಎಸ್ ಮೈತ್ರಿ ಇಂದ ಬರಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ.

 

ಇಂದು ನಡೆದ ಸಿರಾ ತಾಲೂಕಿನ ಬರಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿದ್ದು ನಿರೀಕ್ಷೆಯಂತೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಮೈತ್ರಿಯಂತೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಆಯ್ಕೆಯಾಗಿದ್ದು. ಬರಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಲಿಗನಹಳ್ಳಿ ಯ ಜಯರಾಮಯ್ಯ ಮೊದಲಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು. ಬರಗೂರುನ ಯಶೋಧಾ ರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 11ಜನರ ಸದಸ್ಯರು ಸೇರಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಿದ್ದಾರೆ. ಇದೇ ಸಮಯದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಪತ್ರಕರ್ತರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಹಾರೋಗೆರೆ ಲೋಕೇಶ್ ರವರು. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಸದಸ್ಯರಿಗೆ ಅಭಿನಂದನೆಗಳನ್ನು ತಿಳಿಸಿದರು ಮಾದರಿ ಗ್ರಾಮ ಹಾಗೂ ಮಾದರಿ ಗ್ರಾಮ ಪಂಚಾಯಿತಿ ಆಸೆಯೊಂದಿಗೆ ಗ್ರಾಮ ಪಂಚಾಯಿತಿಗೆ ಸ್ಪರ್ಧಿಸಿ ಗೆದ್ದಿದ್ದು ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ನಮ್ಮ ಗ್ರಾಮ ಹಾಗೂ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ನಮ್ಮ ಧ್ಯೇಯವಾಗಿದ್ದು. ಇಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಮಾದರಿ ಗ್ರಾಮಗಳಾಗಿ ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಉದ್ದೇಶವಾಗಿದ್ದು ಮುಂದಿನ ದಿನಗಳಲ್ಲಿ ಎಲ್ಲ ತರಹದ ಅನುದಾನ ತಂದು ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ. ಚುನಾವಣೆಯಲ್ಲಿ ಸಹಕರಿಸಿದ ಎಲ್ಲಾ ಸದಸ್ಯರಿಗೆ ಹಾಗೂ ದಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಮುಖಂಡರಿಗೆ ಅಭಿನಂದನೆಗಳು ತಿಳಿಸಿದರು

Leave a Reply

Your email address will not be published. Required fields are marked *

You cannot copy content of this page

error: Content is protected !!