ಬೆಂಗಳೂರು_ ಮಾಜಿ ವಿಧಾನ ಪರಿಷತ್ ಸದಸ್ಯರಾದ ಬೆಮೆಲ್ ಕಾಂತರಾಜ್ ರವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮತ್ತು ಮಾಜಿ ಕೆಪಿಸಿಸಿ ಅಧ್ಯಕ್ಷರು, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ ಜಿ ಪರಮೇಶ್ವರ ರವರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದುವರೆಗೂ ಕಾಂತರಾಜು ಅವರು ಜೆಡಿಎಸ್ ಪಕ್ಷದಲ್ಲಿ ಇದ್ದರೂ ನಂತರ ಜೆಡಿಎಸ್ ಪಕ್ಷದ ವತಿಯಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು ಆದರೆ ಕೆಲವು ತಿಂಗಳುಗಳಿಂದ ಜೆಡಿಎಸ್ ಪಕ್ಷದ ಮುಖಂಡರೊಂದಿಗೆ ಅಂತರ ಕಾಯ್ದುಕೊಂಡು ದೂರವುಳಿದಿದ್ದ ಬೆಮೆಲ್ ಕಾಂತರಾಜು ರವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರುವ ಮೂಲಕ ಕಾಂಗ್ರೆಸ್ ಬಾವುಟ ಹಿಡಿದಿದ್ದಾರೆ.
ವರದಿ _ಮಾರುತಿ ಪ್ರಸಾದ್ ತುಮಕೂರು