ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ನಳಿನ್‍ಕುಮಾರ್ ಕಟೀಲ್ ವಿಶ್ವಾಸ

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ: ನಳಿನ್‍ಕುಮಾರ್ ಕಟೀಲ್ ವಿಶ್ವಾಸ

ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಜಯಯಾತ್ರೆಯನ್ನು ಬಿಜೆಪಿ ಮುಂದುವರಿಸಿ 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ. 150 ಶಾಸಕರ ಸ್ಥಾನ ಗೆದ್ದು ಮತ್ತೆ ರಾಜ್ಯದಲ್ಲಿ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

 

ಹಾನಗಲ್ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ ಸಜ್ಜನರ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನಡೆದ ರೋಡ್ ಶೋದಲ್ಲಿ ಅವರು ಮಾತನಾಡಿದರು.

 

ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಸಿ.ಎಂ.ಉದಾಸಿ ಅವರ ನೆನಪಿನ ಜೊತೆ ಮತ್ತು ಅವರ ಅಭಿವೃದ್ಧಿಯ ಕಾರ್ಯಗಳನ್ನು ಮುಂದುವರಿಸುವ ದೃಷ್ಟಿಯಿಂದ ಶಿವರಾಜ ಸಜ್ಜನರ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಕಮಲದ ಚಿಹ್ನೆಯನ್ನು ಜನರು ಅರಳಿಸಬೇಕು ಎಂದು ಅವರು ಮನವಿ ಮಾಡಿದರು.

 

ಸಂಸದ ಶಿವಕುಮಾರ್ ಉದಾಸಿ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಜ್ಜನಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದ್ದಾರೆ. ಆದರ್ಶದ ರಾಜಕಾರಣ ಮಾಡುತ್ತಿರುವ ಬೊಮ್ಮಾಯಿ ಅವರ ಕೈಯನ್ನು ಬಲಪಡಿಸಲು ಈ ಕ್ಷೇತ್ರದಲ್ಲಿ ಶಿವರಾಜ ಅವರನ್ನು ಗೆಲ್ಲಿಸಿ ಎಂದು ಅವರು ವಿನಂತಿಸಿದರು.

 

ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಸಚಿವರಾದ ಮುರುಗೇಶ್ ನಿರಾಣಿ, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ, ಶಾಸಕರಾದ ರಾಜುಗೌಡ, ಅರುಣ್ ಕುಮಾರ್ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ ಮತ್ತು ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!