BIG NEWS: ಕಾಂಗ್ರೆಸ್ ಪಕ್ಷದ 20 ಶಾಸಕರು ಬಿಜೆಪಿ ಸೇರ್ಪಡೆಗೆ ಸಿದ್ಧತೆ

BIG NEWS: ಕಾಂಗ್ರೆಸ್ ಪಕ್ಷದ 20 ಶಾಸಕರು ಬಿಜೆಪಿ ಸೇರ್ಪಡೆಗೆ ಸಿದ್ಧತೆ

 

ಬೆಂಗಳೂರು: ಕಾಂಗ್ರೆಸ್ ಪಕ್ಷದ 20 ಶಾಸಕರು ಬಿಜೆಪಿಗೆ ಬರಲು ಸಿದ್ಧರಾಗಿದ್ದಾರೆ. ಅವರನ್ನು ಕರೆತರುವ ಜವಾಬ್ದಾರಿಯನ್ನು ಸಚಿವ ಮುನಿರತ್ನ ಅವರಿಗೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

 

ಬೆಂಗಳೂರಿನಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಆಯೋಜಿಸಿದ್ದ ಸಮುದಾಯದ ಜನಪ್ರತಿನಿಧಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಸುಮಾರು 20 ಶಾಸಕರು ಬಿಜೆಪಿಗೆ ಬರಲು ಸಿದ್ಧರಾಗಿದ್ದು, ಅವರನ್ನು ಕರೆತರುವ ಜವಾಬ್ದಾರಿಯನ್ನು ತೋಟಗಾರಿಕೆ ಸಚಿವ ಮುನಿರತ್ನ ಅವರಿಗೆ ನೀಡಲಾಗಿದೆ ಎಂದರು.

 

ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ಅನೇಕ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಯಿಂದ ಯಾವ ಶಾಸಕರು, ಮುಖಂಡರು ಕಾಂಗ್ರೆಸ್ ಗೆ ಹೋಗಲ್ಲ ಎಂದು ಅವರು ಹೇಳಿದ್ದಾರೆ.

 

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version