ಕಾಂಗ್ರೆಸ್ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ದೂರು ದಾಖಲಿಸಿದ ಬಿಜೆಪಿ ಯುವ ಪಡೆ.
ಇತ್ತೀಚೆಗೆ ಉತ್ತರಪ್ರದೇಶದ ಲಕ್ಷ್ಮಿಪುರ ಕೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ಪರಿಣಾಮ ಹಲವು ರೈತರು ಸಾವಿಗೀಡಾಗಿದ್ದರು ಅದರ ಸಂಬಂಧ ಸಂತ್ರಸ್ತರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ರವರು ಕುಟುಂಬದವರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಯುಪಿ ಪೊಲೀಸರು ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು ಇದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದವು ಅದರ ಅಂಗವಾಗಿ ತುಮಕೂರಿನಲ್ಲಿ ಸಹ ಪ್ರತಿಭಟನೆ ನಡೆಸಿದ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಪ್ರತಿಭಟನೆ ವೇಳೆ ಕೇಸರಿ ವಸ್ತ್ರಕ್ಕೆ ಮಸಿ ಬಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಪಾದಯಾತ್ರೆ ಮೂಲಕ ಮೂಲಕ ತೆರಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತುಮಕೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಸ್ ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಯಶಸ್ ರವರು ಕಾಂಗ್ರೆಸ್ನವರು ಹಿಂದಿನಿಂದಲೂ ಹಿಂದೂಗಳ ಮೇಲೆ ದೌರ್ಜನ್ಯ ಮಾಡುವ ಪ್ರವೃತ್ತಿ ನಡೆಸಿಕೊಂಡು ಬಂದಿದ್ದು ಅದನ್ನು ಮುಂದುವರೆಸುವ ಪ್ರಯತ್ನ ಮಾಡುತ್ತಿದ್ದಾರೆ ಅದನ್ನು ಕೂಡಲೇ ಅವರು ನಿಲ್ಲಿಸಬೇಕು ಕೇಸರಿ ವಸ್ತ್ರ ಇಡೀದೇಶದ ಹಿಂದುಗಳ ಪ್ರತೀಕ ಅಂತಹ ವಸ್ತ್ರಕ್ಕೆ ತುಮಕೂರು ಯುವಕಾಂಗ್ರೆಸ್ ಪದಾಧಿಕಾರಿಗಳು ಅವಮಾನ ಮಾಡಿದ್ದಾರೆ ಇದರ ಮೂಲಕ ಕಾವಿಧಾರಿ ಸಂತರಿಗೂ ಸಹ ಅವಮಾನ ಮಾಡಿದಂತಾಗಿದೆ ಆದ್ದರಿಂದ ಕೂಡಲೇ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಮುಂದಿನ ಎರಡು ದಿನದಲ್ಲಿ ಕಾಂಗ್ರೆಸ್ ಕಚೇರಿಗೆ ತುಮಕೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಹಾಗೂ ಎಸ್ಟಿ ಮೋರ್ಚಾ ವತಿಯಿಂದ ಮುತ್ತಿಗೆ ಹಾಕಲಿದ್ದೇವೆ ಎಂದು ತಿಳಿಸಿದ್ದಾರೆ.