ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನ ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ – 1039 ಯೂನಿಟ್‌ ರಕ್ತ ಸಂಗ್ರಹಣೆಯ ಮೂಲಕ ದಾಖಲೆ

 

ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನ ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ – 1039 ಯೂನಿಟ್‌ ರಕ್ತ ಸಂಗ್ರಹಣೆಯ ಮೂಲಕ ದಾಖಲೆ

 

1039 ಜನರಿಂದ ರಕ್ತದಾನ – ರಾಜ್ಯದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ರಕ್ತ ಸಂಗ್ರಹಣೆ

17 ದಿನಗಳ ಕಾಲ ಸತತ ಸೇವಾ ಕಾರ್ಯಗಳ ಆಯೋಜನೆ

 

ಬೆಂಗಳೂರು ಸೆಪ್ಟೆಂಬರ್: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ *ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯಕುಮಾರ್‌* ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್‌ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲಾ ಕಾರ್ಯಕ್ರಮಗಳಲ್ಲೂ ಅತಿ ಹೆಚ್ಚು 1039 ಯುನಿಟ್‌ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ.

 

ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್‌ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಢುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು *ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯಕುಮಾರ್‌ ತಿಳಿಸಿದರು*.

 

ನಿನ್ನೆ ಬೃಹತ್‌ ರಕ್ತಧಾನ ಶಿಬಿರವನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೇಟ್‌ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು.

 

ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

You cannot copy content of this page

error: Content is protected !!