BREAKING: ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ತೀವ್ರ ಪೆಟ್ಟು ತುಮಕೂರಿಗೆ ಶಿಫ್ಟ್
ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎನ್ನಲಾಗಿದೆ.ಕಲ್ಲೇಟು ಬಿದ್ದು ಕಾಂಗ್ರೆಸ್ ಅಭ್ಯರ್ಥಿ ಪರಮೇಶ್ವರ್ ಅವರ ತಲೆಗೆ ಗಾಯವಾಗಿ ರಕ್ತ ಗಾಯವಾಗಿದ್ದು .
ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ತಲೆಗೆ ಕಲ್ಲೇಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದು, ಪರಮೇಶ್ವರ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪರಮೇಶ್ವರ್ ಅವರನ್ನು ಕಾರ್ಯಕರ್ತರು ಎತ್ತಿಕೊಂಡು ಕುಣಿಯುತ್ತಿದ್ದ ಸಂದರ್ಭದಲ್ಲಿ ಹೂವು ಎಸೆಯಲಾಗಿದೆ. ಈ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿ ಕಲ್ಲೆಸೆದಿದ್ದಾನೆ. ಕಲ್ಲು ಬಿದ್ದ ಕೂಡಲೇ ಪರಮೇಶ್ವರ ತಲೆ ಹಿಡಿದುಕೊಂಡಿದ್ದಾರೆ. ತಲೆಗೆ ಪೆಟ್ಟು ಬಿದ್ದು ಗಾಯವಾಗಿ ರಕ್ತ ಸೋರಿಕೆಯಾಗಿದ್ದು, ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕೊರಟಗೆರೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಕೂಡ ದುಷ್ಕರ್ಮಿ ಪತ್ತೆಗೆ ಮುಂದಾಗಿದ್ದಾರೆ.
ತುಮಕೂರಿಗೆ ಶಿಫ್ಟ್
ತಲೆಗೆ ತೀವ್ರ ಪೆಟ್ಟಾದ ಹಿನ್ನೆಲೆಯಲ್ಲಿ ಡಾ. ಜಿ ಪರಮೇಶ್ವರ್ ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ತುಮಕೂರಿನ ಹೆಗ್ಗೆರೆಗೆ ಕರೆಯಲಾಗಿದ್ದು ಮನೆಯಲ್ಲಿ ಅವರಿಗೆ ನುರಿತ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯಕ್ಕೆ ಯಾವುದೇ ಗಂಭೀರ ಗಾಯವಾಗದೆ ಅಲ್ಪ ಪ್ರಮಾಣದಲ್ಲಿ ತಲೆಗೆ ಪೆಟ್ಟಾಗಿದ್ದು ಪರಮೇಶ್ವರ್ ಅವರು ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಭಿಮಾನಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ
ಇನ್ನು ಡಾ. ಜಿ ಪರಮೇಶ್ವರ್ ಅವರ ತಲೆಗೆ ಬೆಟ್ಟದ ಬೆನ್ನಲ್ಲೇ ಡಾಕ್ಟರ್ ಜಿ ಪರಮೇಶ್ವರ್ ರವರ ಅಭಿಮಾನಿಗಳಿಗೆ ತೀವ್ರ ಆತಂಕ ತಂದೊಡ್ಡಿದ್ದು ಸದ್ಯಕ್ಕೆ ಯಾರು ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಪರಮೇಶ್ವರವರ ತಲೆಗೆ ಪೆಟ್ಟು ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗದೆ ಇರುವುದರಿಂದ ಸದ್ಯಕ್ಕೆ ಗೊಂದಲ ಉಂಟಾಗಿದ್ದು ಪೊಲೀಸರು ಸಹ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಲ್ಲಾ ಆಯಮ್ಮದಲ್ಲೂ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ