ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳೇನು -ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ

 

 ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯವರು ನಾವು ಅಧಿಕಾರಕ್ಕೆ ಬಂದರೆ ರೈತರ ಬೆಳೆಗಳಿಗೆ ದುಪ್ಪಟ್ಟು ಬೆಲೆ ನಿಡ್ತಿವಿ ಅಂತ ಹೇಳಿದ್ದರು. ಆದ್ರೆ ಅವರು ದುಪ್ಪಟ್ಟು ಬೆಲೆಯ ಬದಲಿಗೆ ದುಪ್ಪಟ್ಟು ಖರ್ಚು ಮಾಡಿದ್ದಾರೆಂದು ಮಾಜಿ ಮುಖ್ಯಮಂತ್ರಿಗಳು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಡಬಿ ವಾಡಿ ಸೇರಿದಂತೆ ವಿವಿಧೆಡೆ ನಡೆದ ಬಹಿರಂಗ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿರವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ರೈತರ ಪರ ಯೋಜನೆಗಳನ್ನು ಜಾರಿಗೆ ತರ್ತಿವಿ ಅಂತ ಹೇಳಿ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಡಿಸೇಲ್, ಪೆಟ್ರೋಲ್, ಸಿಲಿಂಡರ್ ಬೆಲೆಯನ್ನು ಸಹ ಹೆಚ್ಚಳ ಮಾಡ್ತಿದ್ದಾರೆ. ಇದರಿಂದ ದೇಶದಲ್ಲಿರುವ ಬಡಜನರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇಂತಹ ಸರ್ಕಾರಕ್ಕೆ ನೀವು ಬೆಂಬಲ ನೀಡಬೇಕೇ..? ಎಂದು ಕುಮಾರಸ್ವಾಮಿರವರು ಪ್ರಶ್ನಿಸಿದರು.

ಅಲ್ಲದೇ ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅದು ಹೇಗೆ ಅಧಿಕಾರಕ್ಕೆ ಬಂತು ಎಂಬುದರ ಬಗ್ಗೆ ನಾನು ಈಗ ಮಾತಾಡುವುದಿಲ್ಲ. ಅಧಿಕಾರಕ್ಕೆ ಬಂದು ಅವರು ಏನು ಸಾಧಿಸಿದ್ದಾರೆ. ಯಾರಿಗೆ ಒಳ್ಳೆಯದು ಮಾಡಿದ್ದಾರೆ..? ಎಷ್ಟು ಜನಪರ ಯೋಜನೆಗಳನ್ನು ಅವರು ಜಾರಿಗೆ ತಂದಿದ್ದಾರೆಂದು ಪ್ರಶ್ನಿಸಿದರು.

ಕೊರೊನಾ ಸಂದರ್ಭದಲ್ಲಿ ಸರ್ಕಾರ ಜನರನ್ನು ರಕ್ಷಿಸುವ ಕೆಲಸ ಮಾಡುತ್ತಿಲ್ಲ. ಅವರೆಲ್ಲೂ ಚುನಾವಣೆಯಲ್ಲಿ ಬ್ಯೂಸಿಯಾಗ್ಬಿಟ್ಟಿದ್ದಾರೆ. ಅವರಿಗೆ ಜನರ ರಕ್ಷಣೆಯ ಬಗ್ಗೆ ಕಾಳಜಿ ಇಲ್ಲ. ಯಾವುದೇ ಮುಂಜಾಗ್ರತಾ ಕ್ರಮಕೈಗೊಳ್ಳುತ್ತಿಲ್ಲ. ಈ ಸರ್ಕಾರದ ಕಳೆದ ಎರಡು ವರ್ಷಗಳ ಅವಧಿಯಲ್ಲಿ 17 ಉಪಚುನಾವಣೆಗಳು ನಡೆದಿವೆ. ನಾನು ಮಸ್ಕಿಯಲ್ಲಿ ನಮ್ಮ ಅಭ್ಯರ್ಥಿಯನ್ನು ಹಾಕಿಲ್ಲ. ಆದ್ರೆ ಬಸವಕಲ್ಯಾಣದಲ್ಲಿ ಅಭ್ಯರ್ಥಿಯನ್ನ ಹಾಕಿದ್ದಿನಿ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕುಮಾರಸ್ವಾಮಿರವರು ಬಸವಕಲ್ಯಾಣದ ಮತದಾರರಿಗೆ ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಕುಮಾರಸ್ವಾಮಿ ರವರು 2006ರಲ್ಲಿ ರೈತರು ಸಂಕಷ್ಟದಲ್ಲಿದ್ದಂತ ಸಂದರ್ಭದಲ್ಲಿ ರೈತರ ಸಾಲಮನ್ನಾ ಮಾಡಿದ್ದರು. ಆಗ ನಾನು ಕೃಷಿ ಸಚಿವನಾಗಿದ್ದೆ, ಮತ್ತೆ 2018ರಲ್ಲಿ ಸಿಎಂ ಆಗಿದ್ದಾಗ ಕೂಡ ರೈತರ ಸಾಲಮನ್ನಾ ಮಾಡಿದ್ದರು. ಅವರು ರೈತರ, ಬಡವರ, ಶ್ರಮಿಕರ ಪರ ಕಾಳಜಿ ಇರುವಂತ ನಾಯಕರು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಬೋಜೆಗೌಡ, ರಮೇಶಗೌಡ, ಮುಖಂಡರಾದ ತಿಮ್ಮಯ್ಯ ಪುರ್ಲೆ, ನಾಸಿರ್ ಹುಸೇನ್, ಕೃಷ್ಣಾ ರೆಡ್ಡಿ ಸೇರಿದಂತೆ ಅನೇಕರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!