ಎಸ್.ಟಿ. ಸೋಮಶೇಖರ್ ಅವರ ಸಹಕಾರ ವರದಿಗೆ ಅಮಿತ್ ಷಾ ಪ್ರಶಂಸೆ ಪತ್ರ ಹೊರಡಿಸಿದ್ದಾರೆ

ಎಸ್.ಟಿ. ಸೋಮಶೇಖರ್ ಅವರ ಸಹಕಾರ ವರದಿಗೆ ಅಮಿತ್ ಷಾ ಪ್ರಶಂಸೆ ಪತ್ರ ಹೊರಡಿಸಿದ್ದಾರೆ

ಕರ್ನಾಟಕದಲ್ಲಿ ಸಹಕಾರ ಇಲಾಖೆಯ ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್.ಟಿ.ಸೋಮಶೇಖರ್ ಅವರ ಕಾರ್ಯವೈಖರಿಯನ್ನು ಕೇಂದ್ರ ಗೃಹಮಂತ್ರಿಗಳು ಹಾಗೂ ಸಹಕಾರ ಸಚಿವರೂ ಆದ ಅಮಿತ್ ಷಾ ಅವರು ಶ್ಲಾಘಿಸಿದ್ದಾರೆ. ಅಲ್ಲದೆ, ಜೊತೆಯಾಗಿ ದೇಶದಲ್ಲಿ ಸಹಕಾರಿ ಕ್ಷೇತ್ರವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

ಕೇಂದ್ರ ಸರ್ಕಾರ ಈಚೆಗಷ್ಟೇ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದ ಸಂದರ್ಭದಲ್ಲಿ ಕರ್ನಾಟಕದಲ್ಲಿನ ಸಹಕಾರ ವಲಯಕ್ಕೆ ಸಂಬಂಧಪಟ್ಟಂತೆ ಸಹಕಾರ ಸಚಿವರಾಗಿದ್ದ ಎಸ್.ಟಿ. ಸೋಮಶೇಖರ್ ಅವರು ಅಮಿತ್ ಷಾ ಅವರಿಗೆ ವರದಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹಸಚಿವರು, ಕರ್ನಾಟಕದಲ್ಲಿ ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ನಿಮಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

 

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಸಹಕಾರದಿಂದ ಸಮೃದ್ಧಿ” ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದು, ಇದರ ಮೂಲಕ ಎಲ್ಲ ವರ್ಗದ ಜನರನ್ನೂ ತಲುಪಬೇಕು. ಸಹಕಾರ ಕ್ಷೇತ್ರದ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯಾಗಲಿದೆ. ಅಲ್ಲದೆ, ಭಾರತದ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂಬ ವಿಶ್ವಾಸ ನನಗಿದೆ. ಸಹಕಾರ ವಲಯವು ಮತ್ತಷ್ಟು ವೃದ್ಧಿಯಾಗಬೇಕು. ಜೊತೆಗೆ ಇನ್ನಷ್ಟು ವಿಸ್ತರಣೆ ಮಾಡಬೇಕಿದೆ. ನಿಮ್ಮ ಯೋಜನೆ ಹಾಗೂ ಕಾರ್ಯಕ್ರಮಗಳಿಗೆ ನನ್ನ ಸಹಕಾರ ಸದಾ ಇರಲಿದೆ. ಸಹಕಾರ ವಲಯದ ಮೂಲಕ ಅಭಿವೃದ್ಧಿಯ ಪರ್ವ ಕಾಣಬೇಕು ಎಂಬ ನಿಮ್ಮ ಆಶಯಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಅಮಿತ್ ಷಾ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version