ಜೋಷಿಮಠ ಭಾಗದಲ್ಲಿ ಭಾರಿ ಹಿಮಪಾತ ಪ್ರವಾಹ ಭೀತಿಯಲ್ಲಿರುವ ಜಿಲ್ಲೆಗಳು.
ಉತ್ತರಕಾಂಡದ ಚಮೋಲಿ ಜಿಲ್ಲೆಯ ಜೋಷಿಮಠ ಭಾಗದ ಪರ್ವತಗಳಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು ಭಯದ ವಾತಾವರಣ ನಿರ್ಮಾಣವಾಗಿದೆ ಈ ಪ್ರದೇಶದಲ್ಲಿ ಹರಿಯುವ ನದಿಗಳು ಪ್ರವಾಹ ಭೀತಿ ಎದುರಾಗಿದೆ ದೌಲಿ ಗಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿ ಪ್ರವಾಹ ಉಂಟಾಗಿದ್ದು ಅದರ ಪರಿಣಾಮ ಅನೇಕ ಮನೆಗಳು ಕೊಚ್ಚಿಕೊಂಡು ಹೋಗಿದ್ದು ಸುಮಾರು 150ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ
ಈಗಾಗಲೇ ಧಾಲಿಗಂಗ ನದಿ ನೀರಿನ ಮಟ್ಟ ಭಾರಿ ಆಘಾತ ತಂದೊಡ್ಡಿದೆ ನದಿಗಳು ಉಕ್ಕಿ ಹರಿಯುತ್ತಿವೆ.ಬಾರಿ ಹಿಮಪಾತದಿಂದಾಗಿ ಋಷಿ ಗಂಗಾ ವಿದ್ಯುತ್ ಯೋಜನೆಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ದೈಲಿ ಗಂಗಾನದಿ ಪ್ರದೇಶದಲ್ಲಿ ಇರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಡಳಿತ ಸೂಚಿಸಿದೆ. ಭಾರತೀಯ ನೌಕಾಪಡೆ ಎನ್ಡಿಆರ್ಎಫ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದು. ಭಾರತೀಯ ಸೇನೆ, ವಿಮಾನಗಳ ಮೂಲಕ ಪ್ರವಾಹದಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ. ಮುಖ್ಯಮಂತ್ರಿ B S ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಕಳವಳ ವ್ಯಕ್ತ ಪಡಿಸಿದರು.