ತುಮಕೂರು ಜಿಲ್ಲಾ ಕಾಂಗ್ರೆಸ್ ಗೆ ನೂತನ ಸಾರಥಿಯಾಗಿ ಚಂದ್ರಶೇಖರ್ ಗೌಡ ನೇಮಕ.

ತುಮಕೂರು ಜಿಲ್ಲಾ ಕಾಂಗ್ರೆಸ್ ಗೆ ನೂತನ ಸಾರಥಿಯಾಗಿ ಚಂದ್ರಶೇಖರ್ ಗೌಡ ನೇಮಕ.

 

ತುಮಕೂರು_ಇನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡ ಚಂದ್ರಶೇಖರ್ ಗೌಡ ರವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ.ವೇಣುಗೋಪಾಲ್ ಆದೇಶ ಮಾಡಿದ್ದಾರೆ.

 

 

ಇದುವರೆಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಆರ್ ರಾಮಕೃಷ್ಣಪ್ಪನವರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನಾಗಿ ಚಂದ್ರಶೇಖರ್ ಗೌಡ ನೇಮಕವಾಗಿದ್ದಾರೆ.

 

 

 

 

ತುಮಕೂರು ಜಿಲ್ಲಾ ಕಾಂಗ್ರೆಸ್ ವಲಯದಲ್ಲಿ ಹಲವು ದಿನಗಳಿಂದ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗದೆ ಎನ್ನುವ ಕೂಗು ಹಲವು ದಿನಗಳಿಂದ ಹರಿದಾಡುತ್ತಿತ್ತು ಅದಕ್ಕೆ ಪುಷ್ಠಿ ನೀಡುವಂತೆ ಕಾಂಗ್ರೆಸ್ನ ಹಿರಿಯ ನಾಯಕರು ಅಧಿಕೃತವಾಗಿ ಚಂದ್ರಶೇಖರ್ ಗೌಡ ರವರನ್ನು ನೇಮಕ ಮಾಡಿದ್ದಾರೆ.

 

 

 

ನೂತನವಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಚಂದ್ರಶೇಖರ್ ಗೌಡ ರವರು ಸಹ ಕೊರಟಗೆರೆ ಕ್ಷೇತ್ರದ ಮುಖಂಡರಾಗಿದ್ದು ಹಲವು ದಿನಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತೆರೆ ಮರೆಯ ಕಸರತ್ತು ಸಹ ನಡೆಸಿದ್ದರು.

 

 

ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ. ಜಿ ಪರಮೇಶ್ವರ್ ರವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಚಂದ್ರಶೇಖರ್ ಗೌಡ ರವರಿಗೆ ನಿರೀಕ್ಷೆಯಂತೆ ಜಿಲ್ಲಾಧ್ಯಕ್ಷ ಸ್ಥಾನ ಲಭ್ಯವಾಗಿದ್ದು ಹಲವು ಕಾಂಗ್ರೆಸ್ ನಾಯಕರಲ್ಲಿ ಸಂತೋಷ ಇಮ್ಮಡಿಗೊಳಿಸಿದೆ.

 

 

 

 

ವರದಿ_ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version