ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಚೆಕ್ ಹಸ್ತಾಂತರ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಚೆಕ್ ಹಸ್ತಾಂತರ

 

ತುಮಕೂರು_ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಂತೆ ಸಾರ್ವಜನಿಕರಿಗೆ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ಅನ್ವಯವಾಗುವಂತೆ ವೈಯಕ್ತಿಕ ಅಪಘಾತ ವಿಮಾ ಸೌಲಭ್ಯ ನೀಡಲಾಗುತ್ತಿದ್ದು.

 

 

 

ಅದರಂತೆ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ಕಾರಣ ಭಾರತೀಯ ಸ್ಟೇಟ್ ಬ್ಯಾಂಕಿನ ವತಿಯಿಂದ ವೈಯಕ್ತಿಕ ಅಪಘಾತ ವಿಮಾ ಸೌಲಭ್ಯದ ಅಡಿಯಲ್ಲಿ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಇಲಾಖೆಯ ಸಿಬ್ಬಂದಿಯ ಕುಟುಂಬಕ್ಕೆ 30 ಲಕ್ಷ ರೂಗಳ ಚೆಕ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಎಸ್.ಪಿ ರಾಹುಲ್ ಕುಮಾರ್ ಶಹಪೂರ್ವಾಡ್ ರವರು ಹಸ್ತಾಂತರಿಸಿದರು.

 

 

 

 

 

 

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಹುಲ್ ಕುಮಾರ್ ಶಹಪುರ್ವಾಡ್ ಅವರು ಮಾತನಾಡಿ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ವಿಮಾ ಸೌಲಭ್ಯಗಳಿಂದ ನೊಂದ ಕುಟುಂಬಗಳಿಗೆ ಸ್ವಲ್ಪ ಮಟ್ಟಿಗೆ ಆರ್ಥಿಕವಾಗಿ ಸಹಾಯವಾಗಲಿದೆ ಈ ಮೂಲಕ ಪ್ರತಿಯೊಬ್ಬ ವಾಹನ ಸವಾರರು ಅನುಕೂಲವಾಗುವ ವಿಮಾ ಸೌಲಭ್ಯಗಳನ್ನು ಮಾಡಿಸಬೇಕು ಎಂದು ಸಲಹೆ ನೀಡಿದರು.

 

 

 

ಇದೇ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಸ್ಟೇಟ್ ಬ್ಯಾಂಕ್ನ ವಾದಿರಾಜ ಮಾತನಾಡಿ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಸಾಕಷ್ಟು ವಿಮಾ ಸೌಲಭ್ಯಗಳನ್ನು ಜಾರಿಗೆ ತಂದಿದ್ದು .ಈ ಮೂಲಕ ಸಾರ್ವಜನಿಕರು ಸೇರಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಸಾಕಷ್ಟು ಸೌಲಭ್ಯಗಳು ದೊರೆಯುತ್ತಿದ್ದು ಇಂತಹ ಅತ್ಯಮೂಲ್ಯ ವಿಮಾ ಸೌಲಭ್ಯಗಳನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಇದರಿಂದ ನೊಂದ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯವಾಗಲಿದೆ ಎಂದು ತಿಳಿಸಿದರು.

 

 

ಇನ್ನು ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಹಾಯಕ ಆಡಳಿತಾಧಿಕಾರಿಯಾದ ಶಿವಕುಮಾರ್, ಭಾರತೀಯ ಸ್ಟೇಟ್ ಬ್ಯಾಂಕ್ ನ ಪ್ರಾದೇಶಿಕ ವ್ಯವಸ್ಥಾಪಕರಾದ ಅಮೋಘ ಜಾಗಿರ್ದಾರ್ ,ರಾಬರ್ಟ್, ಬ್ಯಾಂಕಿನ ವ್ಯವಸ್ಥಾಪಕರುಗಳಾದ ಶಂಕರಪ್ಪ, ಗಂಗಾಧರ್ ಶ್ರೀನಾಥ್ ,ವಾದಿರಾಜ ಸೇರಿದಂತೆ ಬ್ಯಾಂಕಿನ ಸಿಬ್ಬಂದಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!