21 22 ನೇ ಸಾಲಿನ ಆಯವ್ಯಯ ,(ಬಡ್ಜೆಟ್) ಕುರಿತು ಮೇಲ್ಮನೆಯಲ್ಲಿ ಚರ್ಚಿಸಲು ಸಾರ್ವಜನಿಕರಿಂದ ಸಲಹೆ ಸೂಚನೆ ನೀಡಲು ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡ ಮನವಿ.
2021 22 ನೇ ಸಾಲಿನ ಆಯವ್ಯಯ ಬಜೆಟ್ ಮೇಲಿನ ಚರ್ಚೆಯು ಮೇಲ್ಮನೆಯಲ್ಲಿ ನಡೆಯುತ್ತಿದ್ದು ಶಿರಾ ತಾಲೂಕು ಸೇರಿದಂತೆ ತುಮಕೂರು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ವಿಧಾನಪರಿಷತ್ ಶಾಸಕರಾದ ಚಿದಾನಂದ ಗೌಡರವರು ಜಿಲ್ಲೆಯ ಕುಂದು ಕೊರತೆಗಳನ್ನು ಗುರುತಿಸಿ ಸರ್ಕಾರದ ಗಮನಕ್ಕೆ ತರುವುದು ನನ್ನ ಕರ್ತವ್ಯವಾಗಿದ್ದು .ಆದ್ದರಿಂದ ಈ ಭಾಗದ ಸಾರ್ವಜನಿಕರು ಶಿಕ್ಷಣ ,ಕೃಷಿ, ಆರೋಗ್ಯ ,ನಿರುದ್ಯೋಗ ,ನೀರಾವರಿ ,ಪಡಿತರ ಚೀಟಿ, ತೋಟಗಾರಿಕೆ ಇಲಾಖೆ, ವಸತಿ, ಪಶುಸಂಗೋಪನೆ, ಅರಣ್ಯ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ತಮ್ಮಲ್ಲಿರುವ ಸಮಸ್ಯೆಗಳ ಬಗ್ಗೆ ತಿಳಿಸಲು ಕೋರಿದ್ದಾರೆ .ನಂತರ ತಮ್ಮ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಅನುಕೂಲವಾಗುವಂತೆ ಈ ಕ್ಷೇತ್ರದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಿ ಮಾಹಿತಿ ಸಂಗ್ರಹಿಸಲು ಬಯಸಿರುವ ಶಾಸಕರು ಈ ಸಂಬಂಧ ದಿನಾಂಕ21/ 3 /21ನೇ ಭಾನುವಾರ ಬೆಳಗ್ಗೆ 11 ರಿಂದ 2 ಗಂಟೆಯವರೆಗೆ ಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಲು ನಿರ್ಧರಿಸಿದ್ದು ಆಸಕ್ತರು ಭಾಗವಹಿಸಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳು ಸೂಚನೆಗಳನ್ನು ಲಿಖಿತ ರೂಪದಲ್ಲಿ ನೀಡಲು ಕೋರಲಾಗಿದೆ .ಸಭೆಗೆ ಹಾಜರಾಗದಿರುವ ಜನರು ತಮ್ಮ ಮೊಬೈಲ್ ಸಂಖ್ಯೆ 9611666801 ಸಂಖ್ಯೆ ಗೆ ಕರೆ ಮಾಡಿ ಅಥವಾ ವಾಟ್ಸಪ್ ಸಂದೇಶ ಕಳುಹಿಸುವುದರ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಪ್ರಕಟಣೆಯಲ್ಲಿ ಕೋರಿದ್ದಾರೆ