ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಉತ್ತೇಜಿಸುವ ಕೆಲಸ ಆಗಬೇಕಿದೆ_ಸಿ.ಎಸ್ ಷಡಕ್ಷರಿ.

ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಉತ್ತೇಜಿಸುವ ಕೆಲಸ ಆಗಬೇಕಿದೆ_ಸಿ.ಎಸ್ ಷಡಕ್ಷರಿ.

 

 

ತುಮಕೂರು_ಇಂದಿನ ಸ್ಪರ್ಧಾತ್ಮಕ ಸಮಯದಲ್ಲಿ ಮಕ್ಕಳನ್ನು ಉತ್ತೇಜಿಸುವ ಕೆಲಸವನ್ನು ಪೋಷಕರು ಮಾಡಬೇಕು ಆ ಮೂಲಕ ಮಕ್ಕಳ ಉಜ್ವಲ ಭವಿಷ್ಯಕ್ಕೆ ಪೋಷಕರು ಮುಂದಾಗಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದರು.

 

 

ತುಮಕೂರಿನ ಬಾಲ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತುಮಕೂರು ಜಿಲ್ಲಾ ಘಟಕದ ವತಿಯಿಂದ 2022 _23ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಅಡೆ-ತಡೆಗಳನ್ನು ಬದಿಗೊಟ್ಟಿ ಗುರಿ ಮುಟ್ಟುವ ಕೆಲಸವನ್ನು ಮಕ್ಕಳು ಮಾಡಬೇಕು ಆ ಮೂಲಕ ಮಕ್ಕಳ ಬೆಂಬಲಕ್ಕೆ ಪೋಷಕರು ಸಹ ನಿಲ್ಲುವ ಮೂಲಕ ಮಕ್ಕಳ ಸಾಧನೆಗೆ ಸಹಕಾರಿಯಾಗಬೇಕು ಎಂದರು.

 

 

 

 

ಇನ್ನು ಮುಂಬರುವ ದಿನದಲ್ಲಿ ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸುವ ಗುರಿ ಹೊಂದಲಾಗಿದೆ ಇನ್ನು ರಾಜ್ಯದ್ಯಂತ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ನೌಕರರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಈ ಮೂಲಕ ಮಕ್ಕಳನ್ನು ಉತ್ತೇಜಿಸುವ ಕೆಲಸದೊಂದಿಗೆ ಮಕ್ಕಳಿಗೆ ಸ್ಪೂರ್ತಿದಾಯಕ ಮನೋಭಾವವನ್ನ ಸೃಷ್ಟಿಸುವುದರ ಜೊತೆಗೆ ಇಂದು ವೃದ್ಧಾಶ್ರಮದ ಪರಿಕಲ್ಪನೆ ಹೆಚ್ಚಾಗುತ್ತಿದೆ ಹಾಗಾಗಿ ಮಕ್ಕಳು ಸಹ ಪೋಷಕರನ್ನ ಪಾಲನೆ ಮಾಡುವ ಕೆಲಸದೊಂದಿಗೆ ಪೋಷಕರ ಹಾರೈಕೆ ಮಾಡಬೇಕಾಗಿದೆ ಎಂದಿದ್ದಾರೆ.

 

ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ರವರು ಮಕ್ಕಳು ಮಾಡಿದ ಸಾಧನೆಯನ್ನು ಗುರುತಿಸುವ ಕೆಲಸ ಸಾಮಾಜಿಕವಾಗಿ ಆಗುತ್ತಿರುವುದು ಒಳ್ಳೆಯ ಕೆಲಸ ಈ ಮೂಲಕ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸುವ ಗುಣ ಪೋಷಕರಲ್ಲಿ ಬರಬೇಕು ಎಂದರು.

 

 

 

 

 

ಇನ್ನು ಇದೇ ಸಂದರ್ಭದಲ್ಲಿ  ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

 

 

ಇನ್ನು ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹರಾಜು ಎನ್, ಗಿರಿ ಗೌಡ, ದಿನೇಶ್, ಸಿದ್ದೇಶ್ ,ಮೋಹನ್ ಕುಮಾರ್, ಶಿವಲಿಂಗಯ್ಯ ,ಚೇತನ್ ಯತಿಕುಮಾರ್ ಸೇರಿದಂತೆ ರಾಜ್ಯ ಮಟ್ಟದ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರು , ಮಕ್ಕಳು ಹಾಗೂ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

 

 

ವರದಿ _ಮಾರುತಿ ಪ್ರಸಾದ್  ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!