ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಇಲಾಖೆಗಳ ಸಹಕಾರ ಅಗತ್ಯ: ಅಶೋಕ ಜಿ. ಯರಗಟ್ಟಿ

ತುಮಕೂರು: ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಜಾಗೃತಿ ಮೂಡಿಸಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ ಜಿ. ಯರಗಟ್ಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿಂದು ಮಕ್ಕಳ ಹಕ್ಕುಗಳ ಮಾಸಾಚರಣೆ ಅಂಗವಾಗಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬಾಲ್ಯವಿವಾಹ, ಬಾಲ ಕಾರ್ಮಿಕರಿಂದ ಮಕ್ಕಳನ್ನು ರಕ್ಷಿಸುವಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಅಲ್ಲದೇ ಮಕ್ಕಳ ಮಾಸಾಚರಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಎಂದರು.

ಜನವರಿ ರಿಂದ ೬ರಿಂದ ೯ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಾರ್ಯಕ್ರಮ ಆರಂಭವಾಗಿದ್ದು, ಶಾಲಾ ಶಿಕ್ಷಕರಿಗೆ ಮಕ್ಕಳ ರಕ್ಷಣೆಯ ಬಗ್ಗೆ ತರಬೇತಿ ನೀಡಬೇಕು. ಕೊರೊನಾ ಸಮಯದಲ್ಲಿ ಗ್ರಾಮಾಂತರ ಪ್ರದೇಶದ ಭಾಗದಲ್ಲಿ ಹೆಚ್ಚು ಬಾಲ್ಯ ವಿವಾಹವಾಗಿರುವ ಬಗ್ಗೆ ಸಾಕಷ್ಟು ಸುದ್ದಿಗಳು ಕೇಳಿ ಬರುತ್ತಿದ್ದು, ಬಗ್ಗೆ ಆಯಾ ತಾಲೂಕು ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ಮಕ್ಕಳ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮಕ್ಕಳ ರಕ್ಷಣ ಘಟಕದಲ್ಲಿ ೧೧೮ ಹೆಚ್ಐವಿ ಸೋಂಕಿತ ಮಕ್ಕಳಿದ್ದು, ಪ್ರತಿ ಮಾಹೆ ೧೦೦೦ ರೂ.ಗಳ ಸಹಾಯಧನ ನೀಡಲಾಗುತ್ತಿದೆ. ಮಕ್ಕಳ ತಂದೆ ಅಥವಾ ತಾಯಿ ಇಲ್ಲದಿದ್ದರೆ ಅಂತಹ ಮಕ್ಕಳಿಗೆ ಶಿಕ್ಷಣ ಸೌಲಭ್ಯ ನೀಡಲಾಗುತ್ತದೆ. ಈಗಾಗಲೇ ದಾನಿಗಳಿಂದ ಶಿಕ್ಷಣಕ್ಕಾಗಿ ಮಕ್ಕಳ ಖಾತೆಗೆ ನೇರವಾಗಿ ಹಣ ಜಮೆ ಮಾಡಲು ಕ್ರಮವಹಿಸಲಾಗಿದೆ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಾಹಿತಿ ನೀಡಿದರು.

ಕೊರೊನಾ ಸಮಯದಲ್ಲಿ ಹಾಸ್ಟೆಲ್ನಿಂದ ಮೂಲ ಸ್ಥಾನಕ್ಕೆ ಹಿಂದಿರುಗಿರುವ ಮಕ್ಕಳು ಏನು ಮಾಡುತ್ತಿದ್ದಾರೆ..? ಆನ್ಲೈನ್ ಕ್ಲಾಸ್ ಪಡೆದಿದ್ದಾರಾ, ವಿದ್ಯಾಗಮ ಕಾರ್ಯಕ್ರಮ ಪಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ  ಸೂಚಿಸಿದರು.

ಅಪ್ರಾಪ್ತ ಮಕ್ಕಳು ದೌರ್ಜನ್ಯಕ್ಕೆ ಒಳಗಾಗದಂತೆ ಅರಿವು ಮೂಡಿಸಿ, ಕೇವಲ ಮಕ್ಕಳಿಗೆ ಮಾತ್ರವಲ್ಲದೇ ಆಯಾ ಶಾಲೆಯ ಮುಖ್ಯೋಪಾಧ್ಯಯರುಗಳು ಸಹ ಮಕ್ಕಳ ರಕ್ಷಣಾಧಿಕಾರಿಯಾಗಬೇಕು. ಅಲ್ಲದೇ ಕೋವಿಡ್೧೯ರ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾಗಿ ಬಾಲ್ಯವಿವಾಹಗಳು ಜಾಸ್ತಿಯಾಗುತ್ತಿದ್ದು, ಪೋಷಕರು ಮತ್ತು ಮಕ್ಕಳಲ್ಲಿ ಬಗ್ಗೆ ಅರಿವು ಮೂಡಿಸುವ ಅವಶ್ಯಕತೆ ಇದೆ. ಆದ್ದರಿಂದ ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂಬಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You cannot copy content of this page

error: Content is protected !!