ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ _ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

 

ಹುಬ್ಬಳ್ಳಿ: ರಾಜ್ಯದ ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ, ಹುಬ್ಬಳ್ಳಿ ನನ್ನ ಇಷ್ಟದ ಊರು, ನಾನು ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದವನು, ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಮುಖ್ಯಮಂತ್ರಿಯಾಗಿ ಅಗತ್ಯ ಪ್ರಾಶಸ್ತ್ಯ ನೀಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

ನಿನ್ನೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಪ್ರವಾಹ ಪೀಡಿತ ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹುಬ್ಬಳ್ಳಿಯಲ್ಲಿ ನನಗೆ ದೊಡ್ಡ ಸ್ನೇಹಿತರ ಬಳಗವೇ ಇದೆ,ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇಲ್ಲಿಯವರೇ. ಅವರೆಲ್ಲರ ಪ್ರೀತಿ, ಆಶೀರ್ವಾದ ಪಡೆದು ನಾನು ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತೇನೆ ಎಂದರು. ಕೇಂದ್ರ ನಾಯಕರಾದ ಪ್ರಧಾನಿ ಮೋದಿ, ಅಮಿತ್ ಶಾ, ಜೆ ಪಿ ನಡ್ಡಾ ಅವರ ನಿರ್ಣಯಗಳಿಂದಾಗಿ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ. ನಾಳೆ ದೆಹಲಿಗೆ ಹೋಗಿ ಅವರ ಬಳಿ ಚರ್ಚಿಸುತ್ತೇನೆ, ಅವರ ಸಹಕಾರ, ವಿಶ್ವಾಸ ಪಡೆದು ಅಧಿಕಾರ ನಡೆಸುತ್ತೇನೆ ಎಂದರು.

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version