ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಂತರ ಸಿದ್ದಗಂಗಾಶ್ರೀಗಳ ಆಶೀರ್ವಾದ ಪಡೆದ ರೇಣುಕಾಚಾರ್ಯ ರವರು ಕರೋನ ಸಂದರ್ಭದಲ್ಲಿ ಕ್ಷೇತ್ರದ ಜನತೆಯ ಬೆನ್ನೆಲುಬಿಗೆ ನಿಲ್ಲುವ ಮೂಲಕ ಕರೋನ ಸೋಂಕಿತರಿಗೆ ಧೈರ್ಯ ತುಂಬಿ ಕ್ಷೇತ್ರದಲ್ಲಿ ತೆಗೆದುಕೊಂಡಿರುವ ಸುರಕ್ಷತಾ ಕ್ರಮಕ್ಕೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಪ್ರತಿಕ್ರಿಯಿಸಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ರವರು ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯಲಿದ್ದಾರೆ ಇದರಲ್ಲಿ ಯಾವುದೇ ಅನುಮಾನವಿಲ್ಲ ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮುಖ್ಯಮಂತ್ರಿ ಯಡಿಯೂರಪ್ಪನವರು ಮುಂದಿನ ಎರಡು ವರ್ಷವೂ ಅವರೇ ಮುಂದುವರೆಯುತ್ತಾರೆ ಎಂದು ಎದುರಾಳಿ ಬಣಕ್ಕೆ ಟಕ್ಕರ್ ನೀಡಿದ್ದಾರೆ.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಿ ಎಲ್ಲರ ಅಭಿಪ್ರಾಯ ಪಡೆದು ನಂತರ ಪಕ್ಷದ ವರಿಷ್ಠರು ಹಾಗೂ ರಾಷ್ಟ್ರೀಯ ಅಧ್ಯಕ್ಷರು ಎಲ್ಲರ ಮುಂದೆ ಚರ್ಚಿಸಿ ಯಡಿಯೂರಪ್ಪನವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಇನ್ನೂ ಅವರು ಕರೋನ ಸಂದರ್ಭದಲ್ಲಿ ಸಾಕಷ್ಟು ಶ್ರಮವಹಿಸಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಹಾಗಾಗಿ ಮುಂದಿನ ಎರಡು ವರ್ಷ ರಾಜ್ಯದಲ್ಲಿ ಯಾವುದೇ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎನ್ನುವುದನ್ನು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರವರು ಸ್ಪಷ್ಟಪಡಿಸಿದ್ದಾರೆ ಹಾಗಾಗಿ ರಾಜ್ಯದಲ್ಲಿ ಮುಂದಿನ ಎರಡು ವರ್ಷ ಸಿಎಂ ಬದಲಾವಣೆಯ ವಿಚಾರಕ್ಕೆ ಪೂರ್ಣವಿರಾಮ ಸಿಕ್ಕಿದ್ದು ಮುಖ್ಯಮಂತ್ರಿ ಯಡಿಯೂರಪ್ಪನವರ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದರು.
ಸಿ ಪಿ ಯೋಗೇಶ್ವರ್ ಅವರ ನಡೆಗೆ ಪ್ರತಿಕ್ರಿಯಿಸಿದ ಅವರು ರಾಜ್ಯದಲ್ಲಿ ಇತರೆ ಶಾಸಕರ ದೆಹಲಿ ಭೇಟಿಗೆ ಯಾವುದೇ ಮಹತ್ವ ಇಲ್ಲ, ಇಂತಹ ಭೇಟಿಗೆ ರಾಷ್ಟ್ರೀಯ ನಾಯಕರು ಸರಿಯಾದ ಉತ್ತರ ನೀಡಿ ಕಳುಹಿಸಿದ್ದಾರೆ . ಮುಖ್ಯಮಂತ್ರಿಗಳ ಬದಲಾವಣೆಯ ಇತರೆ ನಾಯಕರ ನಡೆಗೆ ,ಆತುರದ ನಿರ್ಧಾರಕ್ಕೆ ಉತ್ತಮ ಅಂಕ ಸಿಕ್ಕಿಲ್ಲ, ನಕಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಎಂದಿಗೂ ಉತ್ತಮ ಅಂಕ ಗಳಿಸಲು ಸಾಧ್ಯವಿಲ್ಲ ನಕಲಿ ವಿದ್ಯಾರ್ಥಿಗಳು ಎಂದಿಗೂ ನಕಲಿಯೇ ಅವರು ಅಸಲಿ ವಿದ್ಯಾರ್ಥಿಗಳು ಆಗಲು ಎಂದಿಗೂ ಸಾಧ್ಯವಿಲ್ಲ ಉತ್ತಮ ವಿದ್ಯಾರ್ಥಿ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯ ಎನ್ನುವ ಮೂಲಕ ಸಿ ಪಿ ಯೋಗೇಶ್ವರ್ ಅವರಿಗೆ ಟಾಂಗ್ ನೀಡಿದ್ದಾರೆ.