ತುಮಕೂರು_
ಪ್ರತಿ ವರ್ಷ ಶಿಕ್ಷಣ ಸರ್ಕಾರಿ ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಸಾಕಷ್ಟು ಅನುದಾನಗಳು ಬರುತ್ತಿದ್ದು ಅವುಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಸಲಹೆ ನೀಡಿದರು.
ತುಮಕೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಗ್ನಿಸಂಟ್ ಹಾಗೂ ರೋಟರಿ ಇಂಡಿಯಾ ಸಹಯೋಗದೊಂದಿಗೆ ಮಹಿಳಾ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಶಾಸಕರು ಇಂದಿನ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯವಾಗಿದ್ದು ಎಲ್ಲಾ ಮಕ್ಕಳು ಕಂಪ್ಯೂಟರ್ ಶಿಕ್ಷಣವನ್ನು ಪಡೆಯುವಂತಾಗಬೇಕು ಹಾಗೂ ಸರ್ಕಾರದಿಂದ ಬರುವ ಅನುದಾನವನ್ನು ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವಂತಾಗಬೇಕು ಎಂದರು.
ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು ಖಾಸಗಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯ ಶಿಕ್ಷಣ ದೊರೆಯುವ ಸಲುವಾಗಿ ಸರ್ಕಾರಿ ಕಾಲೇಜುಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಉತ್ತಮ ಲಾಭಗಳನ್ನು ನಿರ್ಮಾಣ ಮಾಡುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ ಪ್ರತಿಯೊಬ್ಬ ವಿದ್ಯಾರ್ಥಿಯು ಕಂಪ್ಯೂಟರ್ ಶಿಕ್ಷಣ ಪಡೆದಾಗ ಮಾತ್ರ ಸರ್ಕಾರದ ಇಂತಹ ಮಹತ್ವಾಕಾಂಕ್ಷೆಯ ಯೋಜನೆಗಳು ಸಾಕಾರಗೊಳ್ಳಲಿವೆ ಎಂದರು .
ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಟಿ ಆರ್ ಲೀಲಾವತಿ, ಐಕ್ಯೂಎಸಿ ಸಂಯೋಜಕ ಶ್ರೀಧರ್, ಐಸಿಟಿ ಸಂಯೋಜಕ ಮೂಜಾತಾಬ್ ಫಾರಿನ್ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು