ವಿಧಾನಪರಿಷತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ಅಭ್ಯರ್ಥಿ ಆರ್ ರಾಜೇಂದ್ರ.

ವಿಧಾನಪರಿಷತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ಅಭ್ಯರ್ಥಿ ಆರ್ ರಾಜೇಂದ್ರ.

 

ಈ ಬಾರಿಯ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಈ ಬಾರಿ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯರು (ಮತದಾರರು) ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ಕಾಂಗ್ರೆಸ್ ಅಭ್ಯರ್ಥಿ ಅರ್ ರಾಜೇಂದ್ರ ವ್ಯಕ್ತಪಡಿಸಿದ್ದಾರೆ.

 

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಡಾಕ್ಟರ್ ಜಿ ಪರಮೇಶ್ವರ್, ಮಾಜಿ ಸಚಿವರಾದ ಟಿ.ಬಿ ಜಯಚಂದ್ರ, ಮಾಜಿ ಸಂಸದ ಎ ಸ್ಪಿ ಮುದ್ದಹನುಮೇಗೌಡ, ಬಿ.ಎನ್ ಚಂದ್ರಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಹಿರಿಯ ಮುಖಂಡರ ನೇತೃತ್ವದಲ್ಲಿ ಈಗಾಗಲೇ ತುಮಕೂರು ಜಿಲ್ಲೆಯ 9 ತಾಲೂಕಿನಲ್ಲಿ ಈಗಾಗಲೇ ಪ್ರಚಾರ ಮಾಡಿದ್ದು.

 

ಶನಿವಾರ ಕುಣಿಗಲ್ನಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಣಿಗಲ್ ಸಂಸದರಾದ ಡಿ.ಕೆ ಸುರೇಶ್ , ಕುಣಿಗಲ್ ಶಾಸಕರಾದ ರಂಗನಾಥ್ ಹಾಗೂ ಎಲ್ಲಾ ಮುಖಂಡರ ನೇತೃತ್ವದಲ್ಲಿ ಕುಣಿಗಲ್ನಲ್ಲಿ ಶನಿವಾರ ಪ್ರಚಾರ ಕಾರ್ಯಕ್ರಮ ನಡೆಯುವುದಾಗಿ ತಿಳಿಸಿದರು.

 

ಇನ್ನು ತುಮಕೂರು ಜಿಲ್ಲೆಯಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಒಗ್ಗಟ್ಟಾಗಿದ್ದಾರೆ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದು ಈ ಬಾರಿಯ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಚುನಾವಣೆಯಲ್ಲಿ ತಾವು ಗೆಲ್ಲುವ ವಿಶ್ವಾಸವನ್ನು ರಾಜೇಂದ್ರ ವ್ಯಕ್ತಪಡಿಸಿದ್ದಾರೆ.

 

ಕಳೆದ ಬಾರಿಯ ಚುನಾವಣೆಯಲ್ಲಿ ತಮಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಕ್ಕಿತು ಆದರೆ ಪ್ರಚಾರಕ್ಕೆ ಹೆಚ್ಚಿನ ಸಮಯ ಸಿಕ್ಕಿರಲಿಲ್ಲ ಆದರೆ ಈ ಬಾರಿ ಕಾಂಗ್ರೆಸ್ ನ ಹಿರಿಯ ಮುಖಂಡರು ಟಿಕೆಟ್ ನೀಡುವುದಾಗಿ ಮುಂಚೆಯೇ ತಿಳಿಸಿದ್ದರು ಹಾಗಾಗಿ ಈ ಬಾರಿ ಹೆಚ್ಚಿನ ಸಮಯ ಇದ್ದಿದ್ದರಿಂದ ಜಿಲ್ಲೆಯಾದ್ಯಂತ ಪ್ರಚಾರಮಾಡಲು ಅನುಕೂಲವಾಯಿತು ಹಾಗೆ ಜಿಲ್ಲೆಯಲ್ಲಿನ ಎಲ್ಲಾ ಸದಸ್ಯರನ್ನು ಈಗಾಗಲೇ ಭೇಟಿ ಮಾಡಿದ್ದು ಚುನಾವಣೆಯಲ್ಲಿ ಎಲ್ಲಾ ಸದಸ್ಯರು ತಮ್ಮನ್ನು ಬೆಂಬಲಿಸಲಿದ್ದಾರೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page

error: Content is protected !!