ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ಪಡೆಯಲು ಒತ್ತಾಯಿಸಿದ ಕಾಂಗ್ರೆಸ್.
ತುಮಕೂರು_ಶಿವಮೊಗ್ಗದಲ್ಲಿ ಸರ್ಕಾರಿ ಕಾಲೇಜು ಆವರಣದಲ್ಲಿ ಕೇಸರಿ ಧ್ವಜ ಹಾರಿಸಿದ ಸಂಬಂಧ ಸಚಿವ ಕೆ ಎಸ್ ಈಶ್ವರಪ್ಪ ನೀಡಿದ್ದ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇನ್ನು ಪ್ರತಿಭಟನೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ತುಮಕೂರು ನಗರ ಮಾಜಿ ಶಾಸಕ ರಫೀಕ್ ಅಹಮದ್ ಮಾತನಾಡಿ ಗೌರವ ಸ್ಥಾನದಲ್ಲಿರುವ ಸಚಿವರೊಬ್ಬರು ಕೇಸರಿ ಧ್ವಜವನ್ನು ಹಾರಿಸುವ ಸಂಬಂಧ ಅಸಂವಿಧಾನಿಕ ಹೇಳಿಕೆ ನೀಡಿದ್ದು ಇದು ರಾಷ್ಟ್ರಧ್ವಜ ,ರಾಜ್ಯ ಹಾಗೂ ದೇಶದ ಜನತೆಗೆ ಅಗೌರವ ತಂದಿದ್ದು ಕೂಡಲೇ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಹಿಂಪಡೆಯಬೇಕು ಅವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಡಳಿತರೂಢ ಬಿಜೆಪಿ ಸರ್ಕಾರ ಹಾಗೂ ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸಹ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ ಹಾಗಾಗಿ ಕೂಡಲೇ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆ ನಿಜಕ್ಕೂ ಖಂಡನೀಯ ಕೂಡಲೇ ಬಿಜೆಪಿ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ರವರು ಕೆ.ಎಸ್ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವ ವರೆಗೂ ಕಾಂಗ್ರೆಸ್ ಪಕ್ಷದ ವತಿಯಿಂದ ನಿರಂತರ ಹೋರಾಟ ಮುಂದುವರಿಯಲಿದೆ ಹಾಗಾಗಿ ಕೂಡಲೇ ಕೆ.ಎಸ್ ಈಶ್ವರಪ್ಪ ರವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ತುಮಕೂರು ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್ ರವರಿಗೆ ಮನವಿ ಪತ್ರ ಸಲ್ಲಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆಂಚಮಾರಯ್ಯ, ಶ್ರೀನಿವಾಸ್, ಲಕ್ಷ್ಮಯ್ಯ ,ಸುಜಾತ, ತುಮಕೂರು ಮಹಾನಗರ ಪಾಲಿಕೆ ಸದಸ್ಯ ನಯಾಜ್, ಮಹೇಶ್, ಗುರುಪ್ರಸಾದ್ ,ನಿರಂಜನ್ ,ಆಟೋ ರಾಜು ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವರದಿ ಮಾರುತಿ ಪ್ರಸಾದ್ ತುಮಕೂರು