ಜಿಲ್ಲೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಾರ್ಯಧ್ಯಕ್ಷರ ಭೇಟಿಯಿಂದ ಕಾರ್ಯಕರ್ತರಲ್ಲಿ ಪಕ್ಷ ಸಂಘಟನೆಯ ಹುಮ್ಮಸ್ಸು ಇಮ್ಮಡಿಗೊಳಿಸಿದೆ ಎಂದು ಕಾಂಗ್ರೆಸ್ ಮುಖಂಡರಾದ ಅತಿಕ್ ಅಹಮದ್ ರವರು ತಿಳಿಸಿದರು.
ತುಮಕೂರಿನ ಬಿಹೆಚ್ ರಸ್ತೆಯ ಸಿದ್ದಗಂಗಾ ಆಸ್ಪತ್ರೆಯ ಮುಂಭಾಗ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ರವರನ್ನು ಜಿಲ್ಲೆಗೆ ಅಲ್ಪಸಂಖ್ಯಾತರ ಘಟಕ ಹಾಗೂ ಎಸ್ಸಿ ಘಟಕದ ಪದಾಧಿಕಾರಿಗಳು ಬರಮಾಡಿ ಕೊಂಡರು .
ಇದೇ ವೇಳೆ ಪ್ರತಿಕ್ರಯಿಸಿದ ಕಾಂಗ್ರೆಸ್ ಮುಖಂಡರಾದ ಅತಿಕ್ ಅಹಮದ್ ರವರು ಜಿಲ್ಲೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಭೇಟಿಯಿಂದ ಕಾರ್ಯಕರ್ತರಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮತ್ತಷ್ಟು ಇಮ್ಮಡಿಗೊಳಿಸಿದೆ ಎಂದರು.
ಪಕ್ಷ ಸಂಘಟನೆಯ ಸಲುವಾಗಿ ಇಂದಿನ ಅವರ ಭೇಟಿ ಮೂಲಕ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡುವ ಮೂಲಕ ಮುಂದಿನ ದಿನದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ಕಾರ್ಯಕರ್ತರದ್ದು.
ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಸಂಬಂಧಿಸಿದಂತೆ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗರಿಷ್ಠ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಪಕ್ಷ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಏರಲಿದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಪಕ್ಷ ಸಂಘಟನೆ ಮುಖ್ಯವಾಗಿದ್ದು ಅದರ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ ಎಂದರು ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು ಹಾಗೂ ಎಸ್ಸಿ ಘಟಕದ ಅಧ್ಯಕ್ಷರಾದ ಬಿ ಜಿ ನಿಂಗರಾಜು, ಹೆಗ್ಗೆರೆ ಪ್ರಸನ್ನ , ವಾಹಿದ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.