ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು ಸಾವು-ನೋವುಗಳಿಗೆ ಹೆಚ್ಚಾಗಿ ಕಂಡುಬರುತ್ತಿದೆ ಇನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡರು ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿಲ್ಲ ಆದಕಾರಣ ತುಮಕೂರು ಜಿಲ್ಲಾ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಸೋಂಕು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು.
ತುಮಕೂರಿನ ಸಿದ್ಧಾರ್ಥ ಕಾಲೇಜಿನಲ್ಲಿ ಸಭೆ ನಡೆಸಿದ ಕಾಂಗ್ರೆಸ್ ಮುಖಂಡರು ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಅದರ ಹತೋಟಿಗೆ ಅನುಸರಿಸಬೇಕಾದ ಕ್ರಮಗಳು ಹಾಗೂ ಸರ್ಕಾರದ ಜಿಲ್ಲಾಡಳಿತಗಳು ವಿಫಲವಾಗಿರುವುದನ್ನು ಎಚ್ಚರಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಸಲಾಯಿತು.
ಇನ್ನು ಸಭೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಶಾಸಕರಾದ ಡಾಕ್ಟರ್ ಜಿ ಪರಮೇಶ್ವರ್, ಸಂಸದ ಡಿಕೆ ಸುರೇಶ್ ,ಮಾಜಿ ಸಚಿವ ಟಿ ಬಿ ಜಯಚಂದ್ರ ,ಬಿ ಎನ್ ಚಂದ್ರಪ್ಪ ,ಕೆ ಎನ್ ರಾಜಣ್ಣ ,ಪಾವಗಡ ವೆಂಕಟರಮಣಪ್ಪ, ತಿಪಟೂರು ಷಡಕ್ಷರಿ, ಕುಣಿಗಲ್ ಶಾಸಕರಾದ ಡಾಕ್ಟರ್ ರಂಗನಾಥ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.