ಮಂಗಳೂರಿನ ಯೇನಪೋಯ ಆಸ್ಪತ್ರೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು.
ಕೇಂದ್ರದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡರು ಆದ ಆಸ್ಕರ್ ಫರ್ನಾಂಡಿಸ್ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆ ಯಾದ ಯೆನಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು .
ಇದಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಎಸ್ ಆರ್ ಪಾಟೀಲ್ ಸೇರಿದಂತೆ ಹಿರಿಯ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು.
ಇದೇ ಸಂದರ್ಭದಲ್ಲಿ ಹಾಜರಿದ್ದ ಆಸ್ಕರ್ ಫರ್ನಾಂಡಿಸ್ ಅವರ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಧೈರ್ಯ ತುಂಬಿದರು. ಇನ್ನು ಮೂಲಗಳ ಪ್ರಕಾರ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ತೀವ್ರ ಹದಗೆಟ್ಟು ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತದೆ ಎಂದು ಬಲ್ಲ ಮೂಲಗಳ ಪ್ರಕಾರ ತಿಳಿದುಬಂದಿದೆ.