ರಾಜ್ಯದಲ್ಲಿ ಈ ಬಾರಿ 20 ಕ್ಕೂ ಹೆಚ್ಚು ಸ್ಥಾನ ಕಾಂಗ್ರೆಸ್ ಪಡೆಯಲಿದೆ- ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್.
ತುಮಕೂರು – ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಿಂದ ಬಾಕಿ ಇರುವ ಅಭ್ಯರ್ಥಿಗಳ ಹೆಸರು ಶೀಘ್ರದಲ್ಲೇ ಘೋಷಣೆ ಆಗಲಿದೆ ಎಂದು ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
ತುಮಕೂರಿನಲ್ಲಿ ನಗರಾಭಿವೃದ್ದಿ ಇಲಾಖೆ ಹಾಗೂ ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿರುವ ಅವರು ರಾಜ್ಯದಲ್ಲಿ ಏಳು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಣೆ ಆಗಿದ್ದು ಉಳಿದ ಅಭ್ಯರ್ಥಿಗಳ ಹೆಸರು ಇನ್ನೆರಡು ದಿನದಲ್ಲಿ ಘೋಷಣೆ ಆಗಲಿದೆ ಎಂದರು.
ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇದ್ದು ಜನರಿಗೆ ಹೇಳಿದಂತೆ ಗ್ಯಾರಂಟಿಗಳ ಅನುಷ್ಠಾನ ಆಗಿದೆ ಹೆಚ್ಚಿನದಾಗಿ ಗ್ರಾಮೀಣ ಜನರಿಗೆ ಅನುಕೂಲವಾಗುವ ರೀತಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದು ಈಗಾಗಲೇ ವಿವಿಧ ಗ್ಯಾರಂಟಿಗಳ ಯೋಜನೆಗಾಗಿ 36,000 ಕೋಟಿ ಖರ್ಚು ಮಾಡಿದ್ದೇವೆ.
ಇನ್ನು ರಾಜ್ಯದಲ್ಲಿ ಅನುಷ್ಠಾನ ಗೊಂಡಿರುವ ಗೃಹಲಕ್ಷ್ಮಿ ಗೃಹಜೋತಿ,ಯುವನಿಧಿ ಸೇರಿದಂತೆ ವಿವಿಧ ಗ್ಯಾರಂಟಿಗಳನ್ನ ಜಾರಿಗೆ ತಂದಿದ್ದು ಜನ ನಮ್ಮನ್ನ ಈ ಬಾರಿ ಕೈಹಿಡಿತಾರೆ ಅನ್ನೋ ವಿಶ್ವಾಸ ಇದ್ದು ಈ ಬಾರಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದರು.
ಇನ್ನು ಈ ಬಾರಿಯ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ, ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸಹ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದು ಆ ನಿಟ್ಟಿನಲ್ಲಿ ಇನ್ನು ಅವರು ಭೇಟಿ ನೀಡುವ ದಿನಾಂಕ ನಿಗದಿಯಾಗಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಸ್ಕೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಗೃಹ ಸಚಿವರು ಪ್ರಕರಣದ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು.
ಇನ್ನು ಮಹಿಳೆ ನೀಡಿರುವ ದೂರು ಸಂಬಂಧ ಸಂಪೂರ್ಣ ತನಿಖೆ ನಡೆಯಲಿದ್ದು ಇನ್ನೂ ದೂರು ನೀಡಿರುವ ಮಹಿಳೆ ವಿವಿಧ ಠಾಣೆಗಳಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಕೇಸ್ ಗಳನ್ನು ದಾಖಲು ಮಾಡಿದ್ದು ಅವುಗಳ ತನಿಖೆಯನ್ನು ಸಹ ಮಾಡಲಾಗುವುದು ಆ ನಂತರ ಸತ್ಯಾ ಸತ್ಯತೆ ಹೊರಬರಲಿದೆ ಎಂದರು.