ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಯುವ ಮುಖಂಡ ನರಸಿಂಹರಾಜು ನಿರ್ಧಾರ.

ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಯುವ ಮುಖಂಡ ನರಸಿಂಹರಾಜು ನಿರ್ಧಾರ.

 

 

 

ತುಮಕೂರು_ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಯುವ ಮುಖಂಡ ನರಸಿಂಹರಾಜು ನಿರ್ಧರಿಸಿದ್ದಾರೆ.

 

 

 

ಇನ್ನು ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಕೆಪಿಸಿಸಿ ಕಚೇರಿಗೆ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ ಅವರು ಕಳೆದ 20 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿರುವ ತಾವು ಕಾಂಗ್ರೆಸ್ ಯುವ ಘಟಕ ಹಾಗೂ ಎನ್ ಎಸ್ ಯು ಐ ಘಟಕದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು ಹಲವು ವರ್ಷದಿಂದ ಹಲವು ಸಮಾಜಮುಖಿ ಕೆಲಸಗಳನ್ನು ನಿರ್ವಹಿಸಿರುವುದಾಗಿ ತಿಳಿಸಿದರು.

 

 

 

 

ಇನ್ನು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಲವಾರು ಮೂಲಭೂತ ಸೌಕರ್ಯಗಳ ಸಮಸ್ಯೆ ಎದ್ದು ಕಾಣುತ್ತಿದ್ದು ಗ್ರಾಮಾಂತರ ಪ್ರದೇಶದಲ್ಲಿ ಹಲವು ಗ್ರಾಮಗಳಿಗೆ ರಸ್ತೆ, ಚರಂಡಿ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಸಮಸ್ಯೆ ಜೊತೆಗೆ ಶ್ರಮಿಕರು ಕಾರ್ಮಿಕರು ಸೇರಿದಂತೆ ಹಲವು ವರ್ಗದ ಜನರು ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ ಎಂದರು.

 

 

 

ಚುನಾವಣೆಗೆ ಸ್ಪರ್ಧಿಸಿ ಯುವ ಸಮೂಹವನ್ನು ಬಳಸಿಕೊಂಡು ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗಾವಕಾಶ, ಉನ್ನತ ಶಿಕ್ಷಣ ಸೇರಿದಂತೆ ಹಲವು ಸೌಕರ್ಯಗಳನ್ನು ನೀಡಬೇಕು ಎಂಬುದು ನಮ್ಮ ಮೂಲ ಉದ್ದೇಶ ಎಂದ ಅವರು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾಲಿ ಹಾಗೂ ಮಾಜಿ ಶಾಸಕರು ಸಾವಿರಾರು ಕೋಟಿ ಅನುದಾನವನ್ನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ ಆದರೆ ಇನ್ನೂ ಹಲವು ಗ್ರಾಮಗಳಿಗೆ ಸಂಚರಿಸಲು ಸರಿಯಾದ ರಸ್ತೆಯೇ ಇಲ್ಲ ಇದರಿಂದ ಗ್ರಾಮಾಂತರ ಪ್ರದೇಶದ ಜನರು ಹೈರಾಣಾಗಿದ್ದಾರೆ ಎಂದರು.

 

 

 

ತುಮಕೂರು ಗ್ರಾಮಾಂತರ ಭಾಗದಲ್ಲಿ ಹಲವು ದಲಿತ ಕೇರಿಗಳು ಇದುವರೆಗೂ ಹಿಂದುಳಿದಿದ್ದು ಸರ್ಕಾರದ ಎಸ್ ಸಿ. ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ತಂದು ದಲಿತರ ಕೇರಿಗಳನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದು ಆ ಅನುದಾನವನ್ನ ಬೇರೆ ಜಾಗದಲ್ಲಿ ವಿನಿಯೋಗಿಸುತಿದ್ದು ಆ ಮೂಲಕ ದಲಿತ ಕೇರಿಗಳು ಇಂದಿಗೂ ಸಹ ಹಿಂದೆ ಉಳಿಯಲು ಕಾರಣವಾಗಿವೆ ಎಂದರು.

 

 

 

ಇನ್ನು ಮುಂಬರುವ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಹಿರಿಯ ನಾಯಕರಿಗೂ ಸಹ ಟಿಕೆಟ್ ನೀಡುವ ಸಂಬಂಧ ಮನವಿ ಮಾಡಿದ್ದು ಟಿಕೆಟ್ ನೀಡುವ ನಿರೀಕ್ಷೆಯು ಸಹ ಇದೆ ಈ ಮೂಲಕ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟವನ್ನು ಹಾರಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.

 

 

 

ವರದಿ ಮಾರುತಿ ಪ್ರಸಾದ್ ತುಮಕೂರು

Leave a Reply

Your email address will not be published. Required fields are marked *

You cannot copy content of this page

error: Content is protected !!
Exit mobile version